ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಪಟಾಕಿ ಸಿಡಿಸುವ ವಿಚಾರಕ್ಕೆ ಗಲಾಟೆ; ಬೆಂಗಳೂರಿನಲ್ಲಿ ಮಹಿಳೆ ಮೇಲೆ ಹಲ್ಲೆ ಮಾಡಿದ ವೃದ್ಧ, ವಿಡಿಯೋ ನೋಡಿ

ದೀಪಾವಳಿ ಆಚರಣೆ ವೇಳೆ ಪಟಾಕಿ ಸಿಡಿಸುವ ವಿಚಾರಕ್ಕೆ ನೆರೆಹೊರೆಯವರ ನಡುವೆ ತೀವ್ರ ಗಲಾಟೆ ನಡೆದಿದ್ದು, ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆದಿರುವ ವಿಡಿಯೋ ವೈರಲ್‌ ಆಗಿದೆ. ಸ್ಥಳೀಯ ಪೊಲೀಸರು ಅಗತ್ಯ ಕ್ರಮ ಕೈಗೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.

ಪಟಾಕಿ ಸಿಡಿಸುವ ವಿಚಾರಕ್ಕೆ ಗಲಾಟೆ; ಮಹಿಳೆ ಮೇಲೆ ಹಲ್ಲೆ ಮಾಡಿದ ವೃದ್ಧ

ಬೆಂಗಳೂರಿನಲ್ಲಿ ಮಹಿಳೆ ಮೇಲೆ ಹಲ್ಲೆ -

Vishakha Bhat Heggar
Vishakha Bhat Heggar Nov 12, 2026 11:46 AM

ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮದ ನಡುವೆ ಪಟಾಕಿ ಸಿಡಿಸುವ ವಿಚಾರಕ್ಕೆ ನೆರೆಹೊರೆಯವರ ನಡುವೆ ಆರಂಭವಾದ ಸಣ್ಣ (Bengaluru Diwali Viral Video) ವಾಗ್ವಾದ ವಿಕೋಪಕ್ಕೆ ತಿರುಗಿ, ವೃದ್ಧರೊಬ್ಬರು ಮಹಿಳೆಯನ್ನು ತಳ್ಳಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಬೆಂಗಳೂರು ನಗರ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆಗೆ ಮುಂದಾಗಿದ್ದಾರೆ.

ಬೆಂಗಳೂರಿನ ಯಲಹಂಕ ವ್ಯಾಪ್ತಿಯ ವಸತಿ ಪ್ರದೇಶವೊಂದರಲ್ಲಿ ದೀಪಾವಳಿ ಆಚರಣೆಯ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಪಟಾಕಿ ಸಿಡಿಸುವ ವಿಚಾರಕ್ಕೆ ನೆರೆಹೊರೆಯವರ ಮಧ್ಯೆ ಭಿನ್ನಾಭಿಪ್ರಾಯ ಉಂಟಾಗಿದ್ದು, ಪಟಾಕಿ ಸಿಡಿಸಬೇಡಿ ಎಂದು ಹೇಳಿದ್ದಾರೆ. ಈ ವೇಳೆ ಮಾತಿನ ಚಕಮಕಿ ಆರಂಭವಾಗಿದೆ. ಗಲಾಟೆಯನ್ನು ಚಿತ್ರೀಕರಿಸುತ್ತಿರುವುದಾಗಿ ಹೇಳಿದಾಗ ವಾಗ್ವಾದ ಮತ್ತಷ್ಟು ತಾರಕಕ್ಕೇರಿದ್ದು, ಅಲ್ಲಿದ್ದ ವೃದ್ಧರೊಬ್ಬರು ಏಕಾಏಕಿ ಬಂದು ಮಹಿಳೆಯನ್ನು ಬಲವಾಗಿ ತಳ್ಳಿದ್ದಾರೆ. ಪರಿಣಾಮ ಮಹಿಳೆ ಆಯತಪ್ಪಿ ನೆಲಕ್ಕೆ ಬಿದ್ದು ಗಾಯಗೊಂಡಿದ್ದಾರೆ. ಈ ಎಲ್ಲ ದೃಶ್ಯಗಳನ್ನು ಆಕೆಯ ಸಹೋದರ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾನೆ.

ವಿಡಿಯೋ ನೋಡಿ



ವಿಡಿಯೋದಲ್ಲಿ ವ್ಯಕ್ತಿಯು ತನಗೆ ಮತ್ತು ತನ್ನ ಸಹೋದರಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಹೇಳಿಕೊಂಡಿದ್ದಾನೆ. ವಿಡಿಯೋದ ಕೊನೆಯ ಭಾಗದಲ್ಲಿ ಆಕೆಯನ್ನು ಸ್ಟ್ರೆಚರ್ ಮೇಲೆ ಮಲಗಿಸಿ ಆಸ್ಪತ್ರೆಗೆ ಸಾಗಿಸುತ್ತಿರುವ ದೃಶ್ಯಗಳು ಸೆರೆಯಾಗಿವೆ. ಘಟನೆಯ ನಂತರ ಸಂತ್ರಸ್ತ ಮಹಿಳೆಯ ಸಹೋದರ ಆಸ್ಪತ್ರೆಯ ದಾಖಲೆಗಳನ್ನು ಸಹ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ

ಸಾಮಾಜಿಕ ಜಾಲತಾಣ 'ಎಕ್ಸ್' ನಲ್ಲಿ ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಮಹಿಳೆಯ ಮೇಲೆ ವೃದ್ಧರು ಕೈ ಮಾಡಿರುವುದನ್ನು ಅನೇಕ ನೆಟ್ಟಿಗರು ಖಂಡಿಸಿದ್ದು, ಹಬ್ಬದ ಸಂಭ್ರಮದ ನೆಪದಲ್ಲಿ ನೆರೆಹೊರೆಯವರ ಮೇಲೆ ದೌರ್ಜನ್ಯ ಎಸಗುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ತಕ್ಷಣವೇ ಎಫ್‌ಐಆರ್ ದಾಖಲಿಸಿ ಬಂಧಿಸುವಂತೆ ಒತ್ತಾಯಿಸಿದ್ದಾರೆ. ಮತ್ತೊಂದೆಡೆ, ಕೆಲವು ಬಳಕೆದಾರರು ವೈರಲ್ ಆಗಿರುವ ವಿಡಿಯೋದಲ್ಲಿ ಘಟನೆಯ ಸಂಪೂರ್ಣ ಹಿನ್ನೆಲೆ ಕಾಣಿಸುತ್ತಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಗಲಾಟೆ ಆರಂಭವಾಗಲು ನಿಖರ ಕಾರಣವೇನು? ವೃದ್ಧರು ತಳ್ಳುವ ಮುನ್ನ ಅಲ್ಲಿ ಏನಾಗಿತ್ತು ಎಂಬುದನ್ನು ತಿಳಿಯಲು ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಯ್ತು ಕಾವ್ಯಾ ಮಾರನ್‌ - ಅನಿರುದ್ಧ್‌ ಪ್ರಪೋಸಲ್‌ ವಿಡಿಯೋ; ಇದರ ಅಸಲಿಯೋ? ನಕಲಿಯೋ?

ಇದಕ್ಕೆ ತಕ್ಷಣ ಪ್ರತಿಕ್ರಿಯಿಸಿರುವ ಬೆಂಗಳೂರು ನಗರ ಪೊಲೀಸರು, ಘಟನೆಯ ಕುರಿತು ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಡಿಸಿಪಿ, ಎಸಿಪಿ ಹಾಗೂ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ರವಾನಿಸಿರುವುದಾಗಿ ತಿಳಿಸಿದ್ದಾರೆ. ಸದ್ಯ ಪೊಲೀಸರು ವಿಡಿಯೋದ ಸತ್ಯಾಸತ್ಯತೆ ಹಾಗೂ ಘಟನೆಯ ಕುರಿತು ಪರಿಶೀಲಿಸುತ್ತಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳೆಯ ಹೇಳಿಕೆ ಹಾಗೂ ವೈದ್ಯಕೀಯ ವರದಿಯನ್ನು ಆಧರಿಸಿ, ಹಲ್ಲೆ ಮತ್ತು ಬೆದರಿಕೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.