ನೀಟ್ ಮರು ಪರೀಕ್ಷೆ ಪ್ರಶ್ನೆ ಪತ್ರಿಕೆಯೂ ಸೋರಿಕೆ? ವೈರಲ್ ವಿಡಿಯೊದ ಅಸಲಿಯತ್ತೇನು?
ಹಿಂದಿನ ಬಾರಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರ ದೇಶಾದ್ಯಂತ ಗಲಭೆಯನ್ನು ಎಬ್ಬಿಸಿತ್ತು. ಇದೀಗ ಮತ್ತೆ ನಡೆಸಿದ ನೀಟ್ ಪ್ರಶ್ನೆ ಪತ್ರಿಕೆಯೂ ಸೋರಿಕೆಯಾಗಿದೆ ಎನ್ನುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಇದರ ಅಸಲಿಯತ್ತೇನು ಎಂಬುದನ್ನು ಪತ್ರಿಕಾ ಮಾಹಿತಿ ಬ್ಯೂರೋದ ಸತ್ಯ ಪರಿಶೀಲನಾ ಘಟಕವು ಪತ್ತೆ ಹಚ್ಚಿದೆ. ಈ ಕುರಿತಾದ ಮಾಹಿತಿ ಇಲ್ಲಿದೆ.
ಸಂಗ್ರಹ ಚಿತ್ರ -
ನವದೆಹಲಿ: ನೀಟ್ (ಯುಜಿ) 2026ರ (NEET (UG)- 2026) ಪರೀಕ್ಷೆಯು ಸಾಕಷ್ಟು ಸುದ್ದಿ ಮಾಡುತ್ತಿದೆ. ಯಾಕೆಂದರೆ ಕಳೆದ ಮೇ ತಿಂಗಳಲ್ಲಿ ನಡೆದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ (NEET paper leak) ವಿಚಾರ ದೇಶಾದ್ಯಂತ ಗಲಭೆಯನ್ನು ಎಬ್ಬಿಸಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಮತ್ತೆ ನಡೆದ ನೀಟ್ ಮರು ಪರೀಕ್ಷೆಯ (NEET re-exam) ಪ್ರಶ್ನೆ ಪತ್ರಿಕೆಯು ಸೋರಿಕೆಯಾಗಿದೆ ಎನ್ನುವ ಮಾಹಿತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇದರ ಅಸಲಿಯತ್ತೇನು ಎಂಬುದನ್ನು ಪರಿಶೀಲನೆ ನಡೆಸಿದ ಪತ್ರಿಕಾ ಮಾಹಿತಿ ಬ್ಯೂರೋದ (Press Information Bureau) ಸತ್ಯ ಪರಿಶೀಲನಾ ಘಟಕವು ಇದು ಒಂದು ಸುಳ್ಳು ಸುದ್ದಿ ಎಂಬುದನ್ನು ಸ್ಪಷ್ಟಪಡಿಸಿದೆ.
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮತ್ತು ಕೇಂದ್ರವು ಜೂನ್ 21ರಂದು ಭಾನುವಾರ ನೀಟ್ ಮರು ಪರೀಕ್ಷೆಯನ್ನು ನಡೆಸಿದ್ದು, ಇದರ ಬಳಿಕ ಸಾಮಾಜಿಕ ಮಾಧ್ಯಮ ಖಾತೆಯಾದ ಟೆಲಿಗ್ರಾಮ್‌ನಲ್ಲಿ ಪರೀಕ್ಷಾ ಪತ್ರಿಕೆ ಸೋರಿಕೆಯಾಗಿದೆ ಎನ್ನುವ ವಿಡಿಯೋವೊಂದು ಕಾಣಿಸಿಕೊಂಡಿದೆ. ಆದರೆ ಇದು ನಕಲಿ ವಿಡಿಯೋ ಎಂಬುದಾಗಿ ಪರೀಕ್ಷಾ ಸಂಸ್ಥೆಯು ಸ್ಪಷ್ಟನೆಯನ್ನು ಕೂಡ ನೀಡಿದೆ.
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರದ ವರದಿಗಳು ಆಧಾರರಹಿತ ಮತ್ತು ಸುಳ್ಳು ಎಂದು ಸೋಮವಾರ ಪತ್ರಿಕಾ ಮಾಹಿತಿ ಬ್ಯೂರೋದ ಸತ್ಯ ಪರಿಶೀಲನಾ ಘಟಕವು ಕೂಡ ಸ್ಪಷ್ಟನೆಯನ್ನು ನೀಡಿದೆ. ಅದು ತನ್ನ ಸಾಮಾಜಿಕ ಮಾಧ್ಯಮ ಖಾತೆಯ ವೇದಿಕೆಯಾದ ಎಕ್ಸ್ ನಲ್ಲಿ ಈ ಕುರಿತು ಮಾಹಿತಿ ನೀಡಿ, ನೀಟ್ (ಯುಜಿ) 2026 ರ ಮರುಪರೀಕ್ಷೆಯ ಪ್ರಶ್ನೆಪತ್ರಿಕೆ ಪರೀಕ್ಷೆಗೂ ಮುನ್ನ ಟೆಲಿಗ್ರಾಮ್‌ನಲ್ಲಿ ಸೋರಿಕೆಯಾಗಿದೆ ಎಂದು ಹೇಳುವ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಲಾಗುತ್ತಿದೆ. ಇದು ನಕಲಿ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಪ್ರಕಾರ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ವರದಿಗಳು ಆಧಾರರಹಿತ ಮತ್ತು ಸುಳ್ಳು ಎಂದು ತಿಳಿಸಿದೆ.
A video is being circulated on social media claiming that the NEET (UG) 2026 Re-Examination question paper was leaked on Telegram before the examination.#PIBFactCheck
— PIB Fact Check (@PIBFactCheck) June 21, 2026
❌ This Claim is #FAKE
✅ According to @NTA_Exams, reports alleging paper leak are unfounded and false.
🔗… pic.twitter.com/KisqaBsbML
ಎನ್‌ಟಿಎ ಎಚ್ಚರಿಕೆ
ನೀಟ್ ಮರು ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಮಾಹಿತಿ ಹರಡುವುದರ ವಿರುದ್ಧ ಎಚ್ಚರಿಕೆಯನ್ನು ನೀಡಿರುವ ಅದು, ವಿದ್ಯಾರ್ಥಿಗಳನ್ನು ವಂಚಿಸಲು ಇಂತಹ ತಪ್ಪು ಮಾಹಿತಿಯನ್ನು ಪ್ರಸಾರ ಮಾಡುವುದು ಗಂಭೀರ ಅಪರಾಧವಾಗಿದೆ. ಇದಕ್ಕಾಗಿ I4ಸಿ ಮತ್ತು ಕಾನೂನು ಜಾರಿ ಸಂಸ್ಥೆಗಳ ಬೆಂಬಲದೊಂದಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಇದನ್ನು ಮಾಡಿ ಹಂಚಿಕೊಂಡವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದೆ. ವಿದ್ಯಾರ್ಥಿಗಳು, ಪೋಷಕರು ಮತ್ತು ಸಾರ್ವಜನಿಕರು ಅಧಿಕೃತ ಮಾಹಿತಿಗಾಗಿ http://neet.nta.nic.in ಮತ್ತು ಅಧಿಕೃತ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಖಾತೆಗಳನ್ನು ಮಾತ್ರ ಪರಿಶೀಲಿಸುವಂತೆ ಮನವಿ ಮಾಡಿದೆ. 20 ಲಕ್ಷ ನೀಟ್ ಆಕಾಂಕ್ಷಿಗಳು ಪರೀಕ್ಷೆಯನ್ನು ಬರೆದಿದ್ದು, ಅವರು ಮುಂದಿನ ಪ್ರಕ್ರಿಯೆಗೆ ಅರ್ಹರಾಗಿದ್ದಾರೆ.
ಜೂನ್ 21ರಂದು ದೇಶದ 5,440 ಕೇಂದ್ರಗಳು ಮತ್ತು ವಿದೇಶಗಳ 14 ಕೇಂದ್ರಗಳಲ್ಲಿ 20 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ನೀಟ್ (ಯುಜಿ) 2026ರ ಮರು ಪರೀಕ್ಷೆಗೆ ಹಾಜರಾಗಿದ್ದರು. ಪರೀಕ್ಷೆಯನ್ನು 13 ಭಾಷೆಗಳಲ್ಲಿ ನಡೆಸಲಾಗಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಪ್ರಕಟಣೆ ಮೂಲಕ ತಿಳಿಸಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಮಹಾನಿರ್ದೇಶಕ ಅಭಿಷೇಕ್ ಸಿಂಗ್, ಮರುಪರೀಕ್ಷೆಯನ್ನು ಸಂಪೂರ್ಣ ಭದ್ರತೆಯಲ್ಲಿ ಯಶಸ್ವಿಯಾಗಿ ನಡೆಸಲಾಗಿದೆ. ಇಲ್ಲಿಯವರೆಗೆ ಪ್ರಶ್ನೆಪತ್ರಿಕೆ ಸೋರಿಕೆಗೆ ಸಂಬಂಧಿಸಿ ನಮಗೆ ಯಾವುದೇ ದೂರುಗಳು ಬಂದಿಲ್ಲ. ಈ ಕುರಿತು ಸಮಗ್ರ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ನೀಟ್ ಮರು ಪರೀಕ್ಷೆಯ ಮೌಲ್ಯಮಾಪನ ಪ್ರಕ್ರಿಯೆಯು ಶೀಘ್ರದಲ್ಲೇ ಪ್ರಾರಂಭವಾಗಲಿದೆ ಮತ್ತು ಫಲಿತಾಂಶಗಳನ್ನು ಸಾಮಾನ್ಯಕ್ಕಿಂತ ವೇಗವಾಗಿ ಪ್ರಕಟಿಸಲಾಗುವುದು ಎಂದರು.
ಕಳೆದ ಮೇ ತಿಂಗಳಲ್ಲಿ ನಡೆದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದದ ಬಳಿಕ 14 ವಿದ್ಯಾರ್ಥಿಗಳ ಆತ್ಮಹತ್ಯೆ ಮಾಡಿಕೊಂಡಿದ್ದರು. ನೀಟ್ ಮರು ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಹಿಸಾರ್ ಜಿಲ್ಲೆಯ 19 ವರ್ಷದ ನೀಟ್ ಆಕಾಂಕ್ಷಿಯೊಬ್ಬರು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಾಲ್ ಟಿಕೆಟ್‌ನಲ್ಲಿ ಇರುವವರೇ ಯಾರೋ, ಪರೀಕ್ಷೆಗೆ ಬಂದವರೇ ಇನ್ಯಾರೋ! ನೀಟ್ ಬರೆಯಲು ಬಂದ 9 ವಂಚಕರು ಖೆಡ್ಡಾಕ್ಕೆ
ರಾಜಸ್ಥಾನದ ಸಿಕಾರ್‌ನಲ್ಲಿ ನೀಟ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಅವರು ಮೂರನೇ ಬಾರಿ ನೀಟ್ ಪರೀಕ್ಷೆ ಬರೆಯುವವರಿದ್ದರು. ಅವರು ಮೊದಲ ಪ್ರಯತ್ನದಲ್ಲಿ ವಿಫಲವಾಗಿದ್ದು, ಎರಡನೇ ಪ್ರಯತ್ನದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ಪರೀಕ್ಷೆ ರದ್ದಾಗಿತ್ತು. ಭಾನುವಾರ ಬೆಳಗ್ಗೆ ಇದ್ದಕ್ಕಿದ್ದಂತೆ ಮನೆಯಲ್ಲಿ ಅಸ್ವಸ್ಥಳಾದ ಅವಳನ್ನು ಸ್ಥಳೀಯ ವೈದ್ಯರ ಬಳಿಗೆ ಕರೆದುಕೊಂಡು ಹೋದಾಗ ಆಕೆ ಕೀಟನಾಶಕ ಸೇವಿಸಿರುವುದು ದೃಢಪಟ್ಟಿದೆ. ಬಳಿಕ ಆಕೆಯನ್ನು ಹಿಸಾರ್‌ನ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿ ಆಕೆ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದಾರೆ.