ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ ಪುಂಡರಿಗೆ ತಕ್ಕ ಶಾಸ್ತ್ರಿ; ಯೋಗಿ ನಾಡಿನಲ್ಲಿ ಅಲ್ಲೇ ಡ್ರಾ ಅಲ್ಲೇ ಬಹುಮಾನ
Viral Video: ಶಾಲಾ ವಿದ್ಯಾರ್ಥಿಯರ ಜತೆ ಇಬ್ಬರು ಯುವಕರು ಅಸಭ್ಯವಾಗಿ ವರ್ತಿಸಿದ್ದಾರೆ. ಉತ್ತರ ಪ್ರದೇಶದ ಫತೇಪುರದ ಜನನಿಬಿಡ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಇದರ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಪೊಲೀಸರು ಸರಿಯಾದ ನಿರ್ಧಾರ ತೆಗೆದುಕೊಂಡಿದ್ದಾರೆ.
ಶಾಲಾ ಬಾಲಕಿಯರಿಗೆ ಕಿರುಕುಳ ನೀಡಿದ ಪುಂಡರು ಮತ್ತು ಕ್ಷಮೆಯಾಚನೆ -
ಲಖನೌ, ಏ. 20: ಇತ್ತೀಚೆಗೆ ಮಹಿಳೆಯರ ರಕ್ಷಣೆ ಬಗ್ಗೆ ಎಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಂಡರೂ ಕಿರುಕುಳ ನೀಡುವ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದಕ್ಕೆ ಸಾಕ್ಷಿ ಎಂಬಂತೆ ಶಾಲಾ ವಿದ್ಯಾರ್ಥಿನಿಯರ ಜತೆ ಇಬ್ಬರು ಯುವಕರು ಅಸಭ್ಯವಾಗಿ ವರ್ತಿಸಿದ್ದಾರೆ. ಉತ್ತರ ಪ್ರದೇಶದ ಫತೇಪುರದ ಜನನಿಬಿಡ ರಸ್ತೆಯಲ್ಲಿ ಈ ಘಟನೆ ನಡೆದಿದ್ದು ಇದರ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ (Viral News) ಆಗುತ್ತಿದ್ದಂತೆ ಪೊಲೀಸರು ಸರಿಯಾದ ನಿರ್ಧಾರ ತೆಗೆದುಕೊಂಡಿದ್ದಾರೆ.
ವಿದ್ಯಾರ್ತಿನಿಯರು ಶಾಲೆಗೆ ತೆರಳುತ್ತಿದ್ದಂತೆ ಬೈಕ್‌ನಲ್ಲಿ ಬಂದ ಪುಂಡರುಇಬ್ಬರಿಗೆ ಕಿರುಕುಳ ನೀಡಿದ್ದಾರೆ. ಚಲಿಸುತ್ತಿದ ಬೈಕ್‌ನ ಮೂಲಕವೇ ವಿದ್ಯಾರ್ಥಿಯೊಬ್ಬಳ ಕೈ ಹಿಡಿದು ಎಳೆದಿದ್ದಾರೆ. ಈ ವಿಡಿಯೊ ವೈರಲ್ ಆಗುತ್ತಿದ್ದಂತೆ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಕೂಡಲೇ ಎಚ್ಚೆತ್ತ ಪೊಲೀಸರು ಕ್ರಮ ಕೈಗೊಂಡಿದ್ದು ಯುವಕರರಿಗೆ ಸರಿಯಾದ ಶಿಕ್ಷೆ ನೀಡಿದ್ದಾರೆ.
ವಿಡಿಯೊ ನೋಡಿ:
उत्तर प्रदेश : जिला फतेहपुर में बाइक सवार 2 लफंगों ने छात्राओं से खुलेआम छेड़छाड़ की, हाथ पकड़कर खींचने का प्रयास किया !!@bnetshukla pic.twitter.com/fhwmwLJEMR
— Sachin Gupta (@Sachingupta) April 20, 2026
ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಿದ್ದು ಆರೋಪಿಯ ಬೈಕ್ ಅನ್ನು ವಶ ಪಡಿಸಿಕೊಂಡಿದ್ದಾರೆ. ಮತ್ತೊಂದು ವಿಡಿಯೊದಲ್ಲಿ ಆರೋಪಿಗಳು ಕೈಮುಗಿದು ಕ್ಷಮೆ ಯಾಚಿಸುತ್ತಿರುವುದು ಕಂಡು ಬಂದಿದ್ದು, ತಾವು ಈ ಕೃತ್ಯಗಳನ್ನು ಪುನರಾವರ್ತಿಸುವುದಿಲ್ಲ ಎಂದು ಹೇಳಿದ್ದಾರೆ. ಪೊಲೀಸ್ ಕಸ್ಟಡಿಯಲ್ಲಿ ಇಬ್ಬರು ಯುವಕರು ಕುಂಟುತ್ತಾ ಕ್ಷಮೆಯಾಚಿಸುತ್ತಿರುವುದು ಕಂಡುಬಂದಿದೆ.
सोशल मीडिया पर वायरल वीडियो जिसमें कोतवाली क्षेत्र अंतर्गत आईटीआई रोड के पास मोटर साइकिल पर सवार दो लड़के स्कूल में जा रही बच्चियों के साथ छींटाकशी, उनका हाथ पकड़ने जैसी हरकत कर रहे हैं। थाना कोतवाली पुलिस द्वारा तुरंत संज्ञान लेते हुए इसमें पुलिस की तरफ से ही पॉक्सो एक्ट और कठोर… pic.twitter.com/Nt8nevexO8
— FATEHPUR POLICE (@fatehpurpolice) April 20, 2026
ಘಟನೆಗೆ ಸಂಬಂಧಿಸಿದ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಶಾಲೆಗೆ ಹೋಗುವ ದಾರಿಯಲ್ಲಿ ಆರೋಪಿಗಳು ಶಾಲಾ ಬಾಲಕಿಯರಿಗೆ ಕಿರುಕುಳ ನೀಡುತ್ತಿರುವುದನ್ನು ಕಂಡು ಬಂದಿದೆ. ಬೈಕ್‌ನಲ್ಲಿ ಬಂದ ಇಬ್ಬರು ಯುವಕರು ಬಾಲಕಿಯರನ್ನು ಹಿಂಬಾಲಿಸಿದ್ದು ಕೈಯನ್ನು ಎಳೆಯುತ್ತಿರುವುದು ಕಾಣಬಹುದು.
282 ಅಡಿ ಎತ್ತರದ ಟವರ್ ಮೇಲೆ ಅಪಾಯಕಾರಿ ಸ್ಟಂಟ್; ಯುವಕ ಪೊಲೀಸ್ ವಶಕ್ಕೆ
ವೈರಲ್ ವಿಡಿಯೊದ ಬಗ್ಗೆ ಅಧಿಕಾರಿ ಅಭಿಮನ್ಯು ಮಾಂಗ್ಲಿಕ್ ಹೇಳಿಕೆ ನೀಡಿ ಇಬ್ಬರು ಯುವಕರ ಬಂಧನವನ್ನು ದೃಢಪಡಿಸಿದ್ದಾರೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ ಮತ್ತು ಪೊಲೀಸರು ಕಠಿಣ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.