ದುಬೈ ಏರ್‌ಪೋರ್ಟ್ ಮೇಲೆ ಇರಾನ್ ಕ್ಷಿಪಣಿ ದಾಳಿ; ದಿಕ್ಕಾಪಾಲಾಗಿ ಓಡಿದ ಜನ, ಹಲವರಿಗೆ ಗಂಭೀರ ಗಾಯ
Viral Video: ಅಮೆರಿಕ-ಇಸ್ರೇಲ್ ದಾಳಿಗೆ ಪ್ರತಿಕ್ರಿಯೆಯಾಗಿ ಇರಾನ್ ಕೂಡ ಕ್ಷಿಪಣಿ ದಾಳಿ ನಡೆಸಿದ್ದು ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಹಾನಿಯಾಗಿದೆ. ಇದರಿಂದಾಗಿ ದುಬೈ ಪ್ರವಾಸಕ್ಕೆ ಹೋಗಿದ್ದ 50ಕ್ಕೂ ಹೆಚ್ಚು ಕನ್ನಡಿಗರು ವಾಪಸ್ ಬರಲು ಆಗದೆ ಪರದಾಡುತ್ತಿದ್ದಾರೆ. ಇನ್ನೊಂದೆಡೆ ಈ ಘಟನೆಯಲ್ಲಿ ನಾಲ್ವರು ಸಿಬ್ಬಂದಿಗಳು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಸದ್ಯ ಇದರ ಭಯಾನಕ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್ ಕ್ಷಿಪಣಿ ದಾಳಿ -
ದುಬೈ, ಮಾ.1: ಇರಾನ್ ಮತ್ತು ಅಮೆರಿಕ-ಇಸ್ರೇಲ್ ನಡುವಿನ ಸಂಘರ್ಷಕ್ಕೆ ಇಡೀ ಜಗತ್ತೇ ತತ್ತರಿಸಿ ಹೋಗಿದೆ. ಅಮೆರಿಕ-ಇಸ್ರೇಲ್ ದಾಳಿಗೆ ಪ್ರತಿಕ್ರಿಯೆಯಾಗಿ ಇರಾನ್ ಕೂಡ ಕ್ಷಿಪಣಿ ದಾಳಿ ನಡೆಸಿದ್ದು ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಹಾನಿಯಾಗಿದೆ. ಇದರಿಂದಾಗಿ ದುಬೈ ಪ್ರವಾಸಕ್ಕೆ ಹೋಗಿದ್ದ 50ಕ್ಕೂ ಹೆಚ್ಚು ಕನ್ನಡಿಗರು ವಾಪಸ್ ಬರಲು ಆಗದೆ ಪರದಾಡುತ್ತಿದ್ದಾರೆ. ಇನ್ನೊಂದೆಡೆ ಈ ಘಟನೆಯಲ್ಲಿ ನಾಲ್ವರು ಸಿಬ್ಬಂದಿಗಳು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಸದ್ಯ ಇದರ ಭಯಾನಕ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ.
ಇರಾನ್ ದಾಳಿಯೂ ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ಪ್ರಭಾವ ಮೀರಿದ್ದು ಪ್ರಯಾಣಿಕರ ಕಟ್ಟಡದ ಭಾಗಕ್ಕೆ ತೀವ್ರ ಹಾನಿಯಾಗಿದೆ. ಪ್ರಯಾಣಿಕರು ಇದ್ದ ಸ್ಥಳದಲ್ಲಿ ದಟ್ಟವಾದ ಹೊಗೆ ಆವರಿಸಿಕೊಂಡಿದ್ದು ಇದರಿಂದಾಗಿ ಪ್ರಯಾಣಿಕರು ಭಯಭೀತರಾಗಿ ಓಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಆದರೆ ಮುನ್ನೆಚ್ಚರಿಕೆ ಭಾಗವಾಗಿ ಟರ್ಮಿನಲ್‌ಗಳನ್ನು ಮೊದಲೇ ತೆರವುಗೊಳಿಸಲಾಗಿತ್ತು.
ವಿಡಿಯೋ ನೋಡಿ:
Evacuations of the Dubai International Airport pic.twitter.com/j0WN7IYysg
— Faytuks Network (@FaytuksNetwork) February 28, 2026
ಈ ದಾಳಿಯಿಂದಾಗಿ ನಾಲ್ವರು ಸಿಬ್ಬಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ವಿಮಾನ ನಿಲ್ದಾಣ ದಾದ್ಯಂತ ಹೊಗೆ ಹರಡುತ್ತಿದ್ದಂತೆ ಭಯಭೀತರಾದ ಪ್ರಯಾಣಿಕರು ಗುಂಪುಗಳ ಉದ್ದಕ್ಕೂ ಓಡುತ್ತಿ ರುವುದನ್ನು ವೀಡಿಯೊಗಳು ತೋರಿಸಿವೆ. ಈ ಬಗ್ಗೆ ದುಬೈ ವಿಮಾನ ನಿಲ್ದಾಣ ಅಧಿಕಾರಿಗಳು ಹೇಳಿಕೆ ನೀಡಿದ್ದು ಘಟನೆಯಲ್ಲಿ ಸಣ್ಣಪುಟ್ಟ ಹಾನಿ ಸಂಭವಿಸಿದೆ. ಅದನ್ನು ತ್ವರಿತವಾಗಿ ನಿಯಂತ್ರಿಸಲಾಗಿದೆ. ಟರ್ಮಿನಲ್‌ಗಳನ್ನು ಮೊದಲೇ ತೆರವು ಮಾಡಲಾಗಿದೆ ಅಂದರು.
Viral Video: ವೇದಿಕೆಯಲ್ಲೇ ಆ್ಯಂಕರ್‌ಗೆ ಚಪ್ಪಲಿಯಿಂದ ಹೊಡೆದ ಖ್ಯಾತ ಗಾಯಕಿ
ಕುವೈತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ಇತರ ವಾಣಿಜ್ಯ ವಿಮಾನ ದಾಳಿಗಳು ವರದಿ ಯಾಗಿವೆ. ದಾಳಿಯ ಬೆನ್ನಲ್ಲೇ ದುಬೈ ಮತ್ತು ಅಬುಧಾಬಿ ಮಾರ್ಗಗಳನ್ನು ಮುಚ್ಚಲಾಗಿದ್ದು, ನೂರಾರು ವಿಮಾನಗಳ ಸಂಚಾರ ರದ್ದಾಗಿದೆ. ಇದರಿಂದಾಗಿ ಲಕ್ಷಾಂತರ ಪ್ರಯಾಣಿಕರು ವಿಮಾನ ನಿಲ್ದಾಣಗಳಲ್ಲಿ ಸಿಲುಕಿಕೊಂಡಿದ್ದರು. ಅಮೆರಿಕ ಮತ್ತು ಇಸ್ರೇಲ್ ದಾಳಿಗಳ ನಂತರ ಇರಾನ್, ಸಿರಿಯಾ, ಕುವೈತ್, ಬಹ್ರೇನ್, ಕತಾರ್ ಮತ್ತು ಯುಎಇಯಂತಹ ದೇಶಗಳು ತಮ್ಮ ವಾಯು ಪ್ರದೇಶವನ್ನು ಮುಚ್ಚಿದ್ದಾರೆ..