ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Pahalgam Terror Attack: ದಾಳಿಗೂ ಮುನ್ನ ಕಾಶ್ಮೀರ ಪ್ರವಾಸದ ವಿಡಿಯೋ ಶೇರ್‌ ಮಾಡಿದ್ದ ಶಿವಮೊಗ್ಗ ಉದ್ಯಮಿ ಪತ್ನಿ; ವಿಡಿಯೋ ನೋಡಿ

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆದಿದ್ದು, ಈ ವರೆಗೆ ಇಬ್ಬರು ವಿದೇಶಿ ಪ್ರಜೆಗಳನ್ನು ಸೇರಿ ಒಟ್ಟು 27 ಮಂದಿ ಮೃತಪಟ್ಟಿದ್ದಾರೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಮಂಜುನಾಥ್ ಬಲಿಯಾಗಿದ್ದು, ಅವರ ಪತ್ನಿ ಪಲ್ಲವಿ ಮತ್ತು ಮಗ ಸುರಕ್ಷಿತವಾಗಿದ್ದಾರೆ.

ದಾಳಿಗೂ ಮುನ್ನ ಕಾಶ್ಮೀರ ಪ್ರವಾಸದ ವಿಡಿಯೋ ಶೇರ್‌ ಮಾಡಿದ್ದ ಉದ್ಯಮಿ ಪತ್ನಿ

Profile Vishakha Bhat Apr 22, 2025 9:16 PM

ಶ್ರೀನಗರ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ (Pahalgam Terror Attack) ಭಯೋತ್ಪಾದಕ ದಾಳಿ ನಡೆದಿದ್ದು, ಈ ವರೆಗೆ ಇಬ್ಬರು ವಿದೇಶಿ ಪ್ರಜೆಗಳನ್ನು ಸೇರಿ ಒಟ್ಟು 27 ಮಂದಿ ಮೃತಪಟ್ಟಿದ್ದಾರೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಮಂಜುನಾಥ್ ಬಲಿಯಾಗಿದ್ದು, ಅವರ ಪತ್ನಿ ಪಲ್ಲವಿ ಮತ್ತು ಮಗ ಸುರಕ್ಷಿತವಾಗಿದ್ದಾರೆ. ಮೂರು ದಿನದ ಹಿಂದೆ ಮಂಜುನಾಥ್‌ ಅವರ ಕುಟುಂಬ ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದರು. ಮಂಗಳವಾರ ಈ ಘಟನೆ ಸಂಭವಿಸಿದೆ. ಸದ್ಯ ಮೃತರ ಪತ್ನಿ ಪಲ್ಲವಿ ಎರಡು ದಿನಗಳ ಹಿಂದೆ ಮಾಡಿದ್ದ ವಿಡಿಯೋ ಇದೀಗ ವೈರಲ್‌ ಆಗಿದೆ.

ಮಂಜುನಾಥ್ ರಾವ್ ಮೂರು ದಿನಗಳ ಹಿಂದೆ ತಮ್ಮ ಪತ್ನಿ ಪಲ್ಲವಿ ಮತ್ತು ಮಕ್ಕಳೊಂದಿಗೆ ಜಮ್ಮು ಮತ್ತು ಕಾಶ್ಮೀರಕ್ಕೆ ಬಂದಿದ್ದರು. ಅವರ ಪತ್ನಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಕಾಶ್ಮೀರದ ಅನುಭವವನ್ನು ಆನಂದಿಸುತ್ತಿರುವ ಕೊನೆಯ ಕ್ಷಣಗಳನ್ನು ತೋರಿಸಲಾಗಿದೆ. ಅದರಲ್ಲಿ ಅವರು ಕಾಶ್ಮೀರದ ಸೌಂದರ್ಯವನ್ನು ವರ್ಣಿಸಿದ್ದಾರೆ. ಪತ್ನಿ ಹಾಗೂ ಮಗನ ಜೊತೆ ಎಂಜಾಯ್‌ ಮಾಡುತ್ತಿರುವ ದೃಶ್ಯ ವಿಡಿಯೋದಲ್ಲಿ ಕಾಣಿಸುತ್ತದೆ.



ಪತಿ ಸಾವಿನ ಕುರಿತು ಮಾತನಾಡಿದ ಪಲ್ಲವಿ, ನನ್ನ ಪತಿಯನ್ನು ನನ್ನ ಕಣ್ಣುದೆರೇ ಕೊಂದರು. . ಈ ವೇಳೆ ನನ್ನ ಹಾಗೂ ಮಗನನ್ನೂ ಕೊಂದುಬಿಡಿ ಎಂದು ಬೇಡಿಕೊಂಡೆ ಆದರೆ ನಿಮ್ಮನ್ನು ಕೊಲ್ಲಲ್ಲ, ಹೋಗಿ ಮೋದಿಗೆ ಹೇಳಿ ಎಂದು ಉಗ್ರರು ಪಲ್ಲವಿಗೆ ಹೇಳಿದ್ದಾರೆ. ನೀವು ಹಿಂದುಗಳಾ ಎಂದು ಕೇಳಿ ಗಂಡಸರನ್ನು ಕೊಂದಿದ್ದಾರೆ ಎಂದು ಅವರು ತಿಳಿಸಿದ್ದಾರೆ. ದಾಳಿಯಲ್ಲಿ ಮತ್ತೊಬ್ಬ ಕನ್ನಡಿಗ ಮೃತಪಟ್ಟಿರುವುದು ತಿಳಿದು ಬಂದಿದೆ. ಹಾವೇರಿಯ ರಾಣೇಬೆನ್ನೂರಿನ ಭರತ್‌ ಭೂಷಣ್‌ ಎಂಬುವವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಇವರು ಮಾಜಿ ಸ್ಪೀಕರ್‌ ಮಾಜಿ ಸ್ಪೀಕರ್ ಕೆ.ಬಿ. ಕೋಳಿವಾಡ ಅವರ ಸಂಬಂಧಿಯಾಗಿದ್ದಾರೆ.

ಈ ಸುದ್ದಿಯನ್ನೂ ಓದಿ: Pahalgam Terror Attack: "ಪ್ಲೀಸ್‌ ನನ್ನ ಗಂಡನನ್ನು ಉಳಿಸಿ" ಅಂಗಲಾಚಿ ಬೇಡಿದ ಮಹಿಳೆ; ಕರುಳು ಚುರ್‌ ಎನ್ನುವ ವಿಡಿಯೋ ವೈರಲ್‌

ಇನ್ನು ರಾಜ್ಯದ ಪ್ರವಾಸಿಗರು ಸಂಕಷ್ಟದಲ್ಲಿರುವ ಹಿನ್ನೆಲೆಯಲ್ಲಿ ನವದೆಹಲಿಯ ಕರ್ನಾಟಕ ಭವನದಲ್ಲಿರುವ ಅಧಿಕಾರಿಗಳ ತಂಡವನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳಲು ರಾಜ್ಯ ಸರ್ಕಾರ ಸೂಚಿಸಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಇಡೀ ಘಟನೆಯ ಮೇಲೆ ನಾವು ತೀವ್ರ ನಿಗಾ ವಹಿಸಿದ್ದು, ದಾಳಿಯ ಸಂತ್ರಸ್ತರಾಗಿರುವ ನಮ್ಮವರ ನೆರವಿಗೆ ನಿಂತಿದ್ದೇವೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.