ರಸ್ತೆಯ ಮಧ್ಯದಲ್ಲಿ ನಮಾಜ್ ಮಾಡಿದ ವ್ಯಕ್ತಿ ಬಂಧನ; ವಿಡಿಯೋ ನೋಡಿ
man arrested for namaz on road: ಜನನಿಬಿಡ ರಸ್ತೆಯ ಮಧ್ಯದಲ್ಲಿ ವ್ಯಕ್ತಿಯೊಬ್ಬ ನಮಾಜ್ ಮಾಡಿದ ಘಟನೆ ಉತ್ತರ ಪ್ರದೇಶದ ರಾಂಪುರದಲ್ಲಿ ನಡೆದಿದೆ. ಇದರ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಪೊಲೀಸರು ಕ್ರಮ ಕೈಗೊಂಡಿದ್ದಾರೆ. ವೈರಲ್ ವಿಡಿಯೊವನ್ನು ಗಮನದಲ್ಲಿಟ್ಟುಕೊಂಡು ಪೊಲೀಸರು ಸಾರ್ವಜನಿಕ ಸ್ಥಳದಲ್ಲಿ ಅಡ್ಡಿಪಡಿಸಿದ್ದಕ್ಕಾಗಿ ಆ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಜನದಟ್ಟಣೆಯ ರಸ್ತೆಯ ಮಧ್ಯದಲ್ಲಿ ನಮಾಜ್ ಮಾಡಿದ ವ್ಯಕ್ತಿ ಬಂಧನ -
ಲಖನೌ, ಏ.20: ಜನನಿಬಿಡ ರಸ್ತೆಯ ಮಧ್ಯದಲ್ಲಿ ವ್ಯಕ್ತಿಯೊಬ್ಬ ನಮಾಜ್ ಮಾಡಿದ ಘಟನೆ ಉತ್ತರ ಪ್ರದೇಶದ (Uttar Pradesh) ರಾಂಪುರದಲ್ಲಿ ನಡೆದಿದೆ. ಇದರ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ (Viral Video) ಆಗಿದ್ದು, ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಸಿವಿಲ್ ಲೈನ್ಸ್ ಪೊಲೀಸ್ ಠಾಣೆ ಪ್ರದೇಶದ ಶಹಾಬಾದ್ ಗೇಟ್ ಕ್ರಾಸಿಂಗ್‌ನಲ್ಲಿ ಈ ಘಟನೆ ನಡೆದಿದೆ. ಸಂಚಾರ ನಿಧಾನವಾಗುತ್ತಿದ್ದಂತೆ ಆ ವ್ಯಕ್ತಿ ರಸ್ತೆಯಲ್ಲೇ ಪ್ರಾರ್ಥನೆ ಸಲ್ಲಿಸಿದ್ದಾನೆ. ಈ ವೇಳೆ ಆತನ ಸುತ್ತಲೂ ಜನಸಮೂಹ ಜಮಾಯಿಸಿತ್ತು.
ವೈರಲ್ ವಿಡಿಯೊವನ್ನು ಗಮನದಲ್ಲಿಟ್ಟುಕೊಂಡು ಪೊಲೀಸರು ಸಾರ್ವಜನಿಕ ಸ್ಥಳದಲ್ಲಿ ಅಡ್ಡಿಪಡಿಸಿದ್ದಕ್ಕಾಗಿ ಆ ವ್ಯಕ್ತಿಯನ್ನು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊವನ್ನು ಗಮನಿಸಿದ ನಂತರ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಸಿಂಗ್ ಹೇಳಿದ್ದಾರೆ.
ಸಿವಿಲ್ ಲೈನ್ಸ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ವಿಡಿಯೊದಲ್ಲಿ ವ್ಯಕ್ತಿಯೊಬ್ಬ ರಸ್ತೆ ಮಧ್ಯದಲ್ಲಿ ನಮಾಜ್ ಮಾಡುತ್ತಿರುವುದನ್ನು ತೋರಿಸಲಾಗಿದೆ. ಇದರ ಆಧಾರದ ಮೇಲೆ, ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ವ್ಯಕ್ತಿಯನ್ನು ವಶಕ್ಕೆ ಪಡೆದು ಜೈಲಿಗೆ ಕಳುಹಿಸಲಾಗುತ್ತಿದೆ ಎಂದು ಸಿಂಗ್ ಹೇಳಿದರು.
ಇಲ್ಲಿದೆ ವಿಡಿಯೊ:
रामपुर में बीच सड़क पर नमाज पढ़ने का वीडियो वायरल...शाहबाद गेट चौराहे पर शख्स ने पढ़ी नमाज...जांच में जुटी पुलिस, फिलहाल सिविल लाइन पुलिस वीडियो मे नमाज़ पड़ने वाले शख्स की जानकारी निकाल रही है और जांच पड़ताल मे जुट गई है@rampurpolice @Uppolice #BREAKINGNEWS #NEWS pic.twitter.com/1yvPSD26bE
— Journalist Deepika singh (@Deepikasingh043) April 19, 2026
ಆ ವ್ಯಕ್ತಿಯ ಕುಟುಂಬವು ಆತ ಮಾನಸಿಕವಾಗಿ ಅಸ್ವಸ್ಥನಾಗಿದ್ದಾನೆ ಎಂದು ಹೇಳಿಕೊಂಡಿದೆ. ತನಿಖೆಯ ಭಾಗವಾಗಿ ಈ ಹೇಳಿಕೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆ ವ್ಯಕ್ತಿ ಪ್ರಾರ್ಥನೆ ಮುಂದುವರಿಸುತ್ತಿದ್ದಾಗ ಜನರು ಜಮಾಯಿಸಿದ್ದಾರೆ. ಇದರಿಂದಾಗಿ ಆ ಪ್ರದೇಶದಲ್ಲಿ ಸಾಮಾನ್ಯ ಸಂಚಾರಕ್ಕೆ ಸ್ವಲ್ಪ ಸಮಯ ತೊಂದರೆಯಾಯಿತು.
ಸೊಳ್ಳೆ ಪರದೆಯೊಳಗೆ ಕುಳಿತು ಕರ್ತವ್ಯ ನಿರ್ವಹಿಸುತ್ತಿರುವ ಸೆಕ್ಯೂರಿಟಿ ಗಾರ್ಡ್: ವಿಡಿಯೊ ವೈರಲ್
ಉತ್ತರ ಪ್ರದೇಶದ ಅಧಿಕಾರಿಗಳು ಕಾನೂನು ಮತ್ತು ಸುವ್ಯವಸ್ಥೆಯ ಗಮನದಲ್ಲಿಟ್ಟುಕೊಂಡು, ಸಾರ್ವಜನಿಕ ರಸ್ತೆಗಳಲ್ಲಿ ಧಾರ್ಮಿಕ ಚಟುವಟಿಕೆಗಳನ್ನು ತಡೆಯಲು ವ್ಯಾಪಕ ಒತ್ತಡ ಹೇರುತ್ತಿರುವ ಮಧ್ಯೆ ಈ ಕ್ರಮ ಕೈಗೊಳ್ಳಲಾಗಿದೆ. ಅನುಮತಿಯಿಲ್ಲದೆ ಪ್ರಾರ್ಥನೆ ಸಲ್ಲಿಸಲು ಸಾರ್ವಜನಿಕ ಸ್ಥಳಗಳನ್ನು ಬಳಸಲಾಗುವುದಿಲ್ಲ, ವಿಶೇಷವಾಗಿ ಅದು ವಾಹನ ಸಂಚಾರ ಅಥವಾ ಸಾರ್ವಜನಿಕ ಸುವ್ಯವಸ್ಥೆಗೆ ಅಡ್ಡಿಪಡಿಸಿದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.
ಅಂದಹಾಗೆ, ನ್ಯಾಯಾಲಯಗಳು ಸಾರ್ವಜನಿಕ ಮತ್ತು ಖಾಸಗಿ ಸ್ಥಳಗಳ ನಡುವೆ ವ್ಯತ್ಯಾಸವನ್ನು ಗುರುತಿಸಿವೆ. ಇತ್ತೀಚಿನ ತೀರ್ಪುಗಳಲ್ಲಿ ಅಲಹಾಬಾದ್ ಹೈಕೋರ್ಟ್ ಸ್ಪಷ್ಟಪಡಿಸಿದಂತೆ, ಸಾರ್ವಜನಿಕ ರಸ್ತೆಗಳ ಮೇಲೆ ನಮಾಜ್ (ಪ್ರಾರ್ಥನೆ) ಸಲ್ಲಿಸುವುದರ ವಿರುದ್ಧ ಪೊಲೀಸರ ಕ್ರಮ ಕೈಗೊಳ್ಳಬಹುದು. ಆದರೆ ಖಾಸಗಿ ಆವರಣಗಳಲ್ಲಿ ನಮಾಜ್ ಸಲ್ಲಿಸಲು ಸರ್ಕಾರದ ಅನುಮತಿ ಅಗತ್ಯವಿಲ್ಲ ಮತ್ತು ಇದು ಧಾರ್ಮಿಕ ಸ್ವಾತಂತ್ರ್ಯದ ಹಕ್ಕಿನ ಅಡಿಯಲ್ಲಿ ರಕ್ಷಿತವಾಗಿದೆ.
ಧಾರ್ಮಿಕ ಸಭೆಗಳನ್ನು ಸಾರ್ವಜನಿಕ ರಸ್ತೆಗಳಲ್ಲಿ ಮಾಡಿದರೆ ಅಧಿಕಾರಿಗಳು ಮಧ್ಯಪ್ರವೇಶಿಸಬಹುದು. ಆದರೆ ಖಾಸಗಿ ಆಸ್ತಿಯೊಳಗೆ ಶಾಂತಿಯುತ ಪೂಜೆಯನ್ನು ನಿರ್ಬಂಧಿಸಲು ಸಾಧ್ಯವಿಲ್ಲ ಎಂದು ತೀರ್ಪು ಒತ್ತಿಹೇಳುತ್ತದೆ.