ಪ್ರತಿಭಟನಾಕಾರರ ಮೇಲೆ ಯಾವುದೇ ಕೇಸಿಲ್ಲ; ಕೇಂದ್ರ ಸರ್ಕಾರದ ಭರವಸೆ: ಸೋನಮ್ ವಾಂಗ್ಚುಕ್
ಕೇಂದ್ರ ಸರ್ಕಾರ ನೀಡಿರುವ ಭರವಸೆಯ ಕಾರಣದಿಂದ ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರು ಗುರುವಾರ ಕಳೆದ 26 ದಿನಗಳಿಂದ ಕೈಗೊಂಡಿದ್ದ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ. ಪ್ರತಿಭಟನಾಕಾರರ ಮೇಲೆ ಯಾವುದೇ ಕೇಸು ದಾಖಲಿಸುವುದಿಲ್ಲ ಎಂದು ಹೇಳಿರುವುದು ತಾನು ಉಪವಾಸ ಅಂತ್ಯಗೊಳಿಸಲು ಮುಖ್ಯ ಕಾರಣ ಎಂದಿರುವ ಅವರು ಸರ್ಕಾರ ನೀಡಿರುವ ಭರವಸೆಯ ಕುರಿತು ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಸಂಗ್ರಹ ಚಿತ್ರ -
ನವದೆಹಲಿ: ಸುಮಾರು ಎರಡು ತಿಂಗಳಿನಿಂದ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆ (student protest) ಕಳೆದ ಸೋಮವಾರದಿಂದ ತೀವ್ರಗೊಂಡ ಬಳಿಕ ಕೇಂದ್ರ ಸರ್ಕಾರ (central govt) ವಿದ್ಯಾರ್ಥಿ ನಾಯಕರೊಂದಿಗೆ ಮಾತುಕತೆಗೆ ಮುಂದಾಗಿದೆ ಮಾತ್ರವಲ್ಲದೆ ಅವರ ಬೇಡಿಕೆಗಳಿಗೆ ಸ್ಪಂದಿಸುವುದಾಗಿ ಭರವಸೆ ನೀಡಿದೆ. ಹೀಗಾಗಿ ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ್ (Sonam Wangchuk) ಅವರು ಕಳೆದ 26 ದಿನಗಳಿಂದ ಕೈಗೊಂಡಿದ್ದ ಉಪವಾಸ ಸತ್ಯಾಗ್ರಹವನ್ನು ಗುರುವಾರ ರಾತ್ರಿ ಅಂತ್ಯಗೊಳಿಸಿದ್ದಾರೆ. ಸರ್ಕಾರ ನೀಡಿರುವ ಭರವಸೆಗಳ ಕುರಿತು ಸಾಮಾಜಿಕ ಮಾಧ್ಯಮದ ಎಕ್ಸ್ ಖಾತೆಯಲ್ಲಿ ಮಾಹಿತಿಯನ್ನು ಕೂಡ ಹಂಚಿಕೊಂಡಿದ್ದಾರೆ.
ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರು ನೀಡಿರುವ ಮಾಹಿತಿ ಪ್ರಕಾರ ಕಳೆದ ಸೋಮವಾರ ಅಂದರೆ ಜುಲೈ 20ರಂದು ನಡೆದ ಹಿಂಸಾಚಾರದಲ್ಲಿ ಭಾಗಿಯಾಗಿದ್ದ ಪ್ರತಿಭಟನಾಕಾರ ವಿದ್ಯಾರ್ಥಿಗಳ ವಿರುದ್ಧ ಯಾವುದೇ ಪ್ರಕರಣ ದಾಖಲಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಭರವಸೆ ನೀಡಿದೆ. ಈ ಹಿನ್ನೆಲೆಯಲ್ಲಿ ತಾನು ಉಪವಾಸ ಅಂತ್ಯಗೊಳಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.
NEET ಸೋರಿಕೆ ವಿವಾದ: ಸಚಿವರ ರಾಜೀನಾಮೆ ಸಿಗುವವರೆಗೂ ಹೋರಾಟ ಎಂದ CJP
ಅವರು ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮದ ಎಕ್ಸ್ ಖಾತೆಯಲ್ಲಿ ವಿಡಿಯೋ ಸಂದೇಶ ಹಂಚಿಕೊಂಡಿದ್ದು, ಸರ್ಕಾರ ನೀಡಿದ ಲಿಖಿತ ಭರವಸೆಗಳನ್ನು ಕೂಡ ತಿಳಿಸಿದ್ದಾರೆ.
END OF HUNGER... BEGINNING OF ACCOUNTABILITY...!
— Sonam Wangchuk (@Wangchuk66) July 24, 2026
Sonam Wangchuk ends his fast after 26 days upon getting assurance from the government and members of parliament of all political parties that the issue of accountability in the failing examination system will be discussed on the… pic.twitter.com/0C9YX5VlsL
ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರು ಸರ್ಕಾರವು ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಲಿಖಿತವಾಗಿ ಭರವಸೆ ನೀಡಿದೆ ಎಂದು ಹೇಳಿದ ಅವರು, ದೆಹಲಿಯ ಜಂತರ್ ಮಂತರ್‌ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುವವರು ಮತ್ತು ಜುಲೈ 20ರಂದು ಸಂಸತ್ತಿಗೆ ನಡೆದ ಮೆರವಣಿಗೆಯಲ್ಲಿ ಭಾಗವಹಿಸುವವರ ವಿರುದ್ಧ ಪ್ರಕರಣಗಳನ್ನು ದಾಖಲಿಸದೇ ಇರಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದರು.
ಕಾಕ್ರೋಚ್ ಜನತಾ ಪಕ್ಷದ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಿರುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ರೀತಿಯ ಕ್ರಮ ಕೈಗೊಳ್ಳುವುದಿಲ್ಲ ಎನ್ನುವ ಸರ್ಕಾರದ ಸ್ಪಷ್ಟ ಭರವಸೆಯನ್ನು ನಾನು ಗೌರವಿಸುತ್ತೇನೆ ಎಂದು ಹೇಳಿದ್ದಾರೆ.
ನೀಟ್ ನಲ್ಲಿ ಅಕ್ರಮ ಬೆಳಕಿಗೆ ಬಂದ ಬಳಿಕ ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆಯನ್ನು ಆಗ್ರಹಿಸಿ ಜೂನ್ 28ರಿಂದ ಸೋನಮ್ ವಾಂಗ್ಚುಕ್ ಅವರು ಅನಿರ್ದಿಷ್ಟ ಉಪವಾಸ ಸತ್ಯಾಗ್ರಹವನ್ನು ಪ್ರಾರಂಭಿಸಿದ್ದರು. ಇದರಿಂದ ಅವರು ಸುಮಾರು 11 ಕೆಜಿ ತೂಕವನ್ನು ಕಳೆದುಕೊಂಡರು. ಈ ಹಿನ್ನೆಲೆಯಲ್ಲಿ ಜುಲೈ 18ರಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
NEET Protests: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ವಿಶೇಷ ಸಂದೇಶ ರವಾನಿಸಿದ ಶುಭಮನ್ ಗಿಲ್!
ಸರ್ಕಾರ ನೀಡಿರುವ ಭರವಸೆ ಏನು?
ಸೋನಮ್ ವಾಂಗ್ಚುಕ್ ಅವರಿಗೆ ಸರ್ಕಾರ ನೀಡಿರುವ ಭರವಸೆಗಳಲ್ಲಿ ನೀಟ್ ಮತ್ತು ಸಂಸತ್ತಿನಲ್ಲಿ ಪರೀಕ್ಷಾ ವ್ಯವಸ್ಥೆಯಲ್ಲಿನ ಅಕ್ರಮಗಳ ಕುರಿತು ಚರ್ಚೆ ಮತ್ತು ನೀಟ್ ಪತ್ರಿಕೆ ಸೋರಿಕೆಯಿಂದ ಆತ್ಮಹತ್ಯೆ ಮಾಡಿಕೊಂಡವರ ಕುಟುಂಬಗಳಿಗೆ ಪರಿಹಾರ ನೀಡುವುದಾಗಿ ತಿಳಿಸಿದೆ. ಪ್ರತಿಭಟನಾಕಾರರ ವಿರುದ್ಧ ಯಾವುದೇ ಪ್ರಕರಣ ದಾಖಲಿಸುವುದಿಲ್ಲ ಎಂದು ಕೂಡ ತಿಳಿಸಿದೆ ಎಂದು ಸೋನಮ್ ವಾಂಗ್ ಚುಕ್ ತಿಳಿಸಿದ್ದಾರೆ.