Viral Video: ಪ್ರಧಾನಿ ಮೋದಿಯ ಕಾರು ಫುಟ್‌ಪಾತ್‌ನಲ್ಲಿ ವಾಶ್- ಇದೇನಾ ಸೆಕ್ಯೂರಿಟಿ ಎಂದ ನೆಟ್ಟಿಗರು!
PM Modi’s Security: ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ಬೆಂಗಾವಲು ಪಡೆಯ ವಾಹನಗಳನ್ನು ಫುಟ್‍ಪಾತ್‍ನಲ್ಲಿ ತೊಳೆದ ಘಟನೆ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ. ಇದರ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಇದೇನಾ ಹೈಸೆಕ್ಯೂರಿಟಿ ಎಂದು ಹಲವರು ಪ್ರಶ್ನಿಸಿದ್ದಾರೆ.
-
Priyanka P
Oct 26, 2025 5:26 PM
ಪಟನಾ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಅಧಿಕೃತ ಬೆಂಗಾವಲು ಪಡೆಯ ವಾಹನಗಳನ್ನು ಕಾರು ಸರ್ವಿಸ್ ಸೆಂಟರ್‌ನಲ್ಲಿ ತೊಳೆಯುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ (Viral Video) ಆಗಿದೆ. ಬಿಹಾರದ ಸಮಸ್ತಿಪುರದಲ್ಲಿ ಈ ಘಟನೆ ನಡೆದಿದೆ. ಇದೇನಾ ಹೈ ಸೆಕ್ಯೂರಿಟಿ ಎಂದು ಕೆಲವರು ಪ್ರತಿಕ್ರಿಯಿಸಿದ್ದರೆ, ಇನ್ನೂ ಕೆಲವರು ಕಾರು ವಾಶ್ ಮಾಲೀಕರಿಗೆ ಕೆಲಸ ಸಿಕ್ಕಿತು ಎಂದು ಸಮರ್ಥಿಸಿಕೊಂಡಿದ್ದಾರೆ.
ಸ್ವತಃ ಈ ವಿಡಿಯೊವನ್ನು ಕಾರು ವಾಶ್ ಮಾಲೀಕರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಇದು ಪ್ರಧಾನಿಯ ಬೆಂಗಾವಲು ಪಡೆಯ ವಾಹನವಲ್ಲ. ಬದಲಾಗಿ ಪ್ರಧಾನಿ ಪ್ರಯಾಣಿಸುವ ಕಾರು. ಭದ್ರತಾ ದೃಷ್ಟಿಯಿಂದ ಪ್ರಧಾನಿಗೆ ಬೇರೆಯದ್ದೇ ವಾಷಿಂಗ್ ಹಾಗೂ ಸರ್ವಿಸಿಂಗ್ ಇರಬೇಕು ಎಂದು ಬಳಕೆದಾರರೊಬ್ಬರು ಕಾಮೆಂಟ್ ಮಾಡಿದ್ದಾರೆ. ಈ ವರ್ಷದ ಜುಲೈನಲ್ಲಿ ಮೋದಿ ಹಂಚಿಕೊಂಡ ಫೋಟೋದಲ್ಲಿ ಅದೇ ಎಸ್‍ಯುವಿನಲ್ಲಿ ಕುಳಿತಿರುವುದು ಕಂಡುಬಂದಿತ್ತು ಎಂದು ಮತ್ತೊಬ್ಬ ಬಳಕೆದಾರರು ತಿಳಿಸಿದ್ದಾರೆ.
ವಿಡಿಯೊ ವೀಕ್ಷಿಸಿ:
Cars from Prime Minister Modi’s official convoy spotted being washed at a local washing point.
— घातक (@Neetivaan) October 25, 2025
Source: Instagram @DelhiPolice https://t.co/EghbDPvkjB pic.twitter.com/NjLIJZR5dr
ಪ್ರತ್ಯಕ್ಷದರ್ಶಿಗಳು ಹೇಳುವಂತೆ, ಸಾಕಷ್ಟು ಜನರು ಇದನ್ನು ಕುತೂಹಲದಿಂದ ವೀಕ್ಷಿಸಿದರು. ಕೆಲವರು ಸೆಲ್ಫಿ ಫೋಟೋ ಕ್ಲಿಕ್ಕಿಸಿದ್ದಾರೆ. ಕಾರ್ ವಾಶ್ ಸಿಬ್ಬಂದಿಯು ಪ್ರಧಾನಿ ಅವರ ಕಾರು ತೊಳೆಯುವುದಕ್ಕೆ ಹರ್ಷ ವ್ಯಕ್ತಪಡಿಸಿದರು ಎಂದು ಹೇಳಿದರು. ಸದ್ಯ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಲಾದ ವಿಡಿಯೊದಲ್ಲಿ, ಪ್ರಧಾನಿಯವರ ಕಾರು ತೊಳೆಯುತ್ತಿರುವುದನ್ನು ತೋರಿಸಲಾಗಿದೆ. ಈ ವಿಡಿಯೊವನ್ನು ಕಾರ್ ವಾಶ್ ಮಾಲೀಕರು ಚಿತ್ರೀಕರಿಸಿದ್ದಾರೆ. ಈ ಘಟನೆಯು ಭದ್ರತಾ ಪ್ರೋಟೋಕಾಲ್‌ಗಳ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಗೆ ನಾಂದಿ ಹಾಡಿದೆ. ಏಕೆಂದರೆ ಪ್ರಧಾನಿ ಮೋದಿ ಬೇರೆ ವಾಹನದಲ್ಲಿ ಅಲ್ಲಿಂದ ತೆರಳಿದ ನಂತರ ಈ ಘಟನೆ ಸಂಭವಿಸಿದೆ.
ಇದನ್ನೂ ಓದಿ: Baba Vanga’s prediction: ಚಿನ್ನದ ಬೆಲೆ ಮತ್ತಷ್ಟು ಹೆಚ್ಚಾಗುತ್ತಾ? ಬಾಬಾ ವಂಗಾ ನುಡಿದ ಸ್ಫೋಟಕ ಭವಿಷ್ಯ ಏನು?
ಚೀನಾದಲ್ಲಿ ಪ್ರಧಾನಿ ಮೋದಿ ಹತ್ಯೆಗೆ ಸಂಚು!
ಚೀನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು ನಡೆದಿತ್ತು ಎಂಬ ಸ್ಫೋಟಕ ಮಾಹಿತಿಯೊಂದು ಬಹಿರಂಗವಾಗಿದೆ. ಕಳೆದ ತಿಂಗಳು ಚೀನಾದಲ್ಲಿ ನಡೆದ ಶಾಂಘೈ ಸಹಕಾರ ಸಂಘದ ಸಭೆಯಲ್ಲಿ ಭಾಗಿಯಾಗಿದ್ದ ಪ್ರಧಾನಿ ಮೋದಿ ಅವರ ಹತ್ಯೆಗೆ ಸಂಚು ನಡೆಸಲಾಗಿತ್ತು ಎಂಬ ಮಾಹಿತಿ ಬಹಿರಂಗವಾಗಿದೆ. ಅಮೆರಿಕದ ಗುಪ್ತಚರ ಸಂಸ್ಥೆ ಸಿಐಎ ವಿರುದ್ಧ ಇಂಥಹದ್ದೊಂದು ಆರೋಪ ಕೇಳಿಬರುತ್ತಿದೆ.
ಅಮೆರಿಕ ಭಾರತದ ಮೇಲೆ ರಷ್ಯಾ ತೈಲ ಖರೀದಿಸದಂತೆ ಒತ್ತಡ ಹೇರುತ್ತಿರುವುದು ಹಾಗೂ ಭಾರತದ ಕೃಷಿ, ಹಾಲಿನ ಮಾರುಕಟ್ಟೆಯನ್ನು ತನಗೆ ಮುಕ್ತಮಾಡಿಕೊಡಬೇಕೆಂಬ ಬೇಡಿಕೆಗೆ ಭಾರತ ಬಗ್ಗದೇ ಇರುವ ಹಿನ್ನೆಲೆಯಲ್ಲಿ, ಭಾರತ ಹಾಗೂ ಅಮೆರಿಕ ನಡುವಿನ ಸಂಬಂಧದಲ್ಲಿ ಸಾಕಷ್ಟು ಬಿರುಕು ಮೂಡಿದೆ. ಇದೀಗ ಇಂಥ ಆಘಾತಕಾರಿ ಸುದ್ದಿ ಹೊರಬಿದ್ದಿರುವುದು ಸಾಕಷ್ಟು ಊಹಾಪೋಹ, ಚರ್ಚೆಗಳಿಗೆ ಕಾರಣವಾಗಿದೆ. ಆದರೆ, ರಷ್ಯಾ- ಭಾರತ ಜಂಟಿಯಾಗಿ ಈ ಲೆಕ್ಕಾಚಾರವನ್ನು ತಲೆಕೆಳಗೆ ಮಾಡಿದವು ಎಂದು ಹೇಳಲಾಗುತ್ತಿದೆ.