ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಶಾಲಾ ಕೊಠಡಿಯೊಳಗೆ ವಿದ್ಯಾರ್ಥಿಗಳಿಂದ ಎಣ್ಣೆ ಪಾರ್ಟಿ! ವೈರಲ್‌ ಆಯ್ತು ವಿಡಿಯೋ

Viral Video: ಶಾಲೆಗೆ ಬರುವ ಮಕ್ಕಳು ಕೊಠಡಿಯಲ್ಲೆ ಕುಳಿತು ಮದ್ಯಪಾನ ಮಾಡಿರುವ ಅಘಾತಕಾರಿ ವಿಡಿಯೊವೊಂದು ವೈರಲ್ ಆಗಿದೆ. ತರಗತಿ ಯೊಳಗೆ ಕುಳಿತ ವಿದ್ಯಾರ್ಥಿಗಳ ಗುಂಪು ಬಾಟಲಿಗಳು ಮತ್ತು ಆಹಾರ ಪ್ಯಾಕೆಟ್‌ಗಳನ್ನು ಹಿಡಿದು ಕುಳಿತುಕೊಂಡಿದ್ದಾರೆ. ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯ ತಕ್ಕಲೈ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಈ ವಿಡಿಯೊ ವೈರಲ್ ಆಗುತ್ತಿದ್ದಂತೆ ಪೋಷಕರು ಆತಂಕವನ್ನು ವ್ಯಕ್ತ ಪಡಿಸಿದ್ದಾರೆ.

ಶಾಲಾ ತರಗತಿಯೊಳಗೆ ವಿದ್ಯಾರ್ಥಿಗಳಿಂದ ಮದ್ಯಪಾನ: ವಿಡಿಯೊ ವೈರಲ್

ಇಂಟರ್ ನೆಟ್ ಚಿತ್ರ -

Profile
Pushpa Kumari Aug 14, 2026 8:51 PM

ತಮಿಳುನಾಡು,ಆ.14: ಶಿಕ್ಷಣ ಪಡೆಯಲೆಂದು ಶಾಲೆಗೆ ಬರುವ ಮಕ್ಕಳು ಕೊಠಡಿಯಲ್ಲೇ ಕುಳಿತು ಮದ್ಯಪಾನ ಮಾಡಿರುವ ಅಘಾತಕಾರಿ ವಿಡಿಯೊವೊಂದು ವೈರಲ್ ಆಗಿದೆ. ತರಗತಿಯೊಳಗೆ ಕುಳಿತ ವಿದ್ಯಾರ್ಥಿಗಳ ಗುಂಪು ಬಾಟಲಿಗಳು ಮತ್ತು ಆಹಾರ ಪ್ಯಾಕೆಟ್‌ಗಳನ್ನು ಹಿಡಿದು ಕುಳಿತು ಕೊಂಡಿದ್ದಾರೆ. ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯ ತಕ್ಕಲೈ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಈ ವಿಡಿಯೊ ವೈರಲ್ (Viral Video) ಆಗುತ್ತಿದ್ದಂತೆ ಪೋಷಕರು ಆತಂಕವನ್ನು ವ್ಯಕ್ತ ಪಡಿಸಿದ್ದಾರೆ.

ವಿಡಿಯೊ ವೈರಲ್ ಆಗುತ್ತಿದ್ದಂತೆ ಶಾಲೆಯ ಪ್ರಾಂಶುಪಾಲರನ್ನು ಕೂಡಲೇ ವರ್ಗಾವಣೆ ಮಾಡಲಾಗಿದೆ. ಈ ಬಗ್ಗೆ ಜಿಲ್ಲಾಡಳಿತವು ತನಿಖೆಗೆ ಆದೇಶಿಸಿದೆ. ಈ ಘಟನೆಯು ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಜವಾಬ್ದಾರಿಯ ಬಗ್ಗೆ ವ್ಯಾಪಕ ಕಳವಳವನ್ನು ಹುಟ್ಟುಹಾಕಿದೆ.

ವಿಡಿಯೋ ನೋಡಿ:



ಪ್ರಾಥಮಿಕ ವರದಿಯ ಪ್ರಕಾರ, ಆಗಸ್ಟ್ 1 ರ ಶನಿವಾರ ವಿಶೇಷ ತರಗತಿಗಳನ್ನು ಶಾಲೆಗಳಲ್ಲಿ ನಡೆಸಲಾಯಿತು. ಇದರಲ್ಲಿ ಅನೇಕ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕ್ಲಾಸ್ ಮುಗಿದ ನಂತರ, ಕೆಲವು ವಿದ್ಯಾರ್ಥಿಗಳು ತರಗತಿಯೊಳಗೆ ಉಳಿದುಕೊಂಡಿದ್ದು ಒಟ್ಟಾಗಿ ಸೇರಿ ಎಣ್ಣೆ ಪಾರ್ಟಿ ಮಾಡಿದ್ದಾರೆ. ವಿದ್ಯಾರ್ಥಿಗಳು ತರಗತಿ ಕೊಠಡಿಯಲ್ಲೇ ಕುಳಿತು ಮದ್ಯಪಾನ ಮಾಡಿದ್ದು ತೀವ್ರ ವಿವಾದಕ್ಕೆ ಕಾರಣವಾಗಿದೆ.

Viral Video: ಗದ್ದೆಯಲ್ಲಿದ್ದ ಆನೆಗೆ ಟಾರ್ಚ್ ತೋರಿಸಿ ಕೆರಳಿಸಿದ ಜನ; ನುಗ್ಗಿ ದಾಳಿ ಮಾಡಿದ ಒಂಟಿ ಸಲಗ

ಈ ಶಾಲೆಯಲ್ಲಿ NEET, JEE ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿಶೇಷ ತರಬೇತಿಯನ್ನು ಆಯೋಜನೆ ಮಾಡಲಾಗುತ್ತದೆ. ಇದರಲ್ಲಿ ಕೆಲವು ವಿದ್ಯಾರ್ಥಿಗಳು ತರಗತಿಯಲ್ಲೇ ಉಳಿದು ಹೊರಗಿನಿಂದ ತಂದಿದ್ದ ಮದ್ಯ ಹಾಗೂ ತಿಂಡಿಗಳನ್ನು ಸೇವಿಸಿದ್ದಾರೆ. ವೈರಲ್ ಆದ ದೃಶ್ಯದಲ್ಲಿ ವಿದ್ಯಾರ್ಥಿಗಳು ಮದ್ಯ ಸೇವಿಸುತ್ತಾ ತಮ್ಮದೆ ಲೋಕದಲ್ಲಿ ಮುಳುಗಿದ್ದಾರೆ. ಸಹಪಾಠಿ ವಿದ್ಯಾರ್ಥಿಯೊಬ್ಬ ಈ ದೃಶ್ಯವನ್ನು ಮೊಬೈಲ್‌ನಲ್ಲಿ ದೃಶ್ಯೀಕರಿಸಿ ಜಾಲತಾಣಗಳಲ್ಲಿ ಶೇರ್ ಮಾಡಿದ್ದಾನೆ.

​ಶಾಲೆಯಲ್ಲಿ ಈ ಲೋಪ ಕಂಡುಬಂದ ಹಿನ್ನೆಲೆಯಲ್ಲಿ ಪ್ರಾಂಶುಪಾಲೆ ಪ್ರಮೀಳಾ ಇವಾಂಜೆಲಿನ್ ಅವರನ್ನು ವರ್ಗಾಯಿಸಲಾಗಿದೆ. ತನಿಖೆಯ ಸಂಶೋಧನೆಗಳ ಆಧಾರದ ಮೇಲೆ ಅಧಿಕಾರಿಗಳು ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.