ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Viral Video: ಕಚ್ಚಿದ ಹಾವನ್ನೇ ಜೀವಂತವಾಗಿ ಹಿಡಿದುಕೊಂಡು ಆಸ್ಪತ್ರೆಗೆ ಓಡೋಡಿ ಬಂದ ವ್ಯಕ್ತಿ

ವ್ಯಕ್ತಿಯೊಬ್ಬ ಕಚ್ಚಿದ ಹಾವನ್ನು ಜೀವಂತವಾಗಿ ಹಿಡಿದು ಚೀಲದಲ್ಲಿ ಹೊತ್ತುಕೊಂಡು ಜೈಪುರದ ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಆಸ್ಪತ್ರೆಗೆ ಬಂದಿದ್ದಾನೆ. ಈ ದೃಶ್ಯವನ್ನು ಕಂಡು ಆಸ್ಪತ್ರೆ ಸಿಬ್ಬಂದಿ ಮತ್ತು ರೋಗಿಗಳು ಶಾಕ್‌ ಆಗಿದ್ದಾರೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಕಚ್ಚಿದ ಹಾವನ್ನು ಹಿಡಿದುಕೊಂಡು ಆಸ್ಪತ್ರೆಗೆ ಬಂದ ವ್ಯಕ್ತಿ

Profile pavithra Jun 27, 2025 3:44 PM

ಜೈಪುರ: ಹಾವೆಂದರೆ ಯಾರಿಗೆ ತಾನೆ ಭಯವಾಗಲ್ಲ ಹೇಳಿ? ಆಕಸ್ಮಾತ್‌ ಆಗಿ ಹಾವು ಕಾಣಿಸಿಕೊಂಡರೆ ಎಲ್ಲರೂ ಬೆಚ್ಚಿಬಿದ್ದು ಓಡುತ್ತಾರೆ. ಆದರೆ ಜೈಪುರದ ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ (RUHS) ಆಸ್ಪತ್ರೆಗೆ ವ್ಯಕ್ತಿಯೊಬ್ಬ ಕಚ್ಚಿದ ಹಾವನ್ನು ಜೀವಂತವಾಗಿ ಹಿಡಿದು ಚೀಲದಲ್ಲಿ ತುಂಬಿಕೊಂಡು ಬಂದ ವಿಚಿತ್ರ ಘಟನೆಯೊಂದು ನಡೆದಿದೆ. ಇದನ್ನು ಕಂಡು ಆಸ್ಪತ್ರೆ ಸಿಬ್ಬಂದಿ ಮತ್ತು ರೋಗಿಗಳು ಶಾಕ್‌ ಆಗಿದ್ದಾರೆ. ಈ ಘಟನೆಯ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈಗ ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್(Viral Video) ಆಗಿದೆ.

ವೈರಲ್ ಆದ ವಿಡಿಯೊದಲ್ಲಿ ವ್ಯಕ್ತಿಯೊಬ್ಬ ಕಪ್ಪು ಚೀಲವನ್ನು ಹಿಡಿದುಕೊಂಡಿರುವುದು ಕಂಡುಬಂದಿದೆ. ಆ ಹಾವು ವಿಷಕಾರಿ ಹೌದೋ? ಅಲ್ಲವೋ? ಎಂದು ತಿಳಿಯಲು ಹಾವನ್ನು ಹಿಡಿದು ತಂದಿರುವುದಾಗಿ ಆತ ತಿಳಿಸಿದ್ದಾನೆ. ಆದರೆ ಆಸ್ಪತ್ರೆಯಲ್ಲಿ ಜೀವಂತ ಹಾವನ್ನು ನೋಡಿದ ಆಸ್ಪತ್ರೆಯ ಸಿಬ್ಬಂದಿ ಮತ್ತು ರೋಗಿಗಳ ಕುಟುಂಬದವರು ಭಯಭೀತರಾಗಿದ್ದಾರೆ. ನಂತರ ಆಸ್ಪತ್ರೆಯ ಸಿಬ್ಬಂದಿ ಸದಸ್ಯರು ಪರಿಸ್ಥಿತಿಯನ್ನು ನಿಭಾಯಿಸಿ ಆ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಹಾವು ವಿಷಕಾರಿಯೇ, ಅಲ್ಲವೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಅದೃಷ್ಟವಶಾತ್, ರೋಗಿಯ ಸ್ಥಿತಿ ಕೂಡ ಸ್ಥಿರವಾಗಿದೆ.

ವಿಡಿಯೊ ಇಲ್ಲಿದೆ ನೋಡಿ...



ಕಳೆದ ವರ್ಷ ಅಕ್ಟೋಬರ್‌ನಲ್ಲಿ ಬಿಹಾರದ ಭಾಗಲ್ಪುರದಲ್ಲಿ ಇದೇ ರೀತಿಯ ಘಟನೆ ಸಂಭವಿಸಿದೆ. ವಿಶ್ವದ ಅತ್ಯಂತ ವಿಷಕಾರಿ ಹಾವುಗಳಲ್ಲಿ ಒಂದಾದ ರಸೆಲ್ಸ್ ವೈಪರ್ ಒಬ್ಬ ವ್ಯಕ್ತಿಯನ್ನು ಕಚ್ಚಿತ್ತು. ಇದರಿಂದ ಹೆದರದ ವ್ಯಕ್ತಿ ಆ ಹಾವನ್ನು ಕೈಯಲ್ಲಿ ಹಿಡಿದುಕೊಂಡು ಆಸ್ಪತ್ರೆಗೆ ಬಂದಿದ್ದ. ಈ ದೃಶ್ಯವನ್ನು ಕಂಡು ಆಸ್ಪತ್ರೆಯ ವೈದ್ಯರು ಶಾಕ್‌ ಆಗಿದ್ದಾರೆ. ಕುತ್ತಿಗೆಗೆ ಹಾವನ್ನು ಸುತ್ತಿಕೊಂಡು ಆ ವ್ಯಕ್ತಿ ಆಸ್ಪತ್ರೆಗೆ ನಡೆದುಕೊಂಡು ಹೋಗುತ್ತಿರುವ ವಿಡಿಯೊ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿತ್ತು.

ಈ ಸುದ್ದಿಯನ್ನೂ ಓದಿ:Viral News: ಟಿಕೆಟ್ ಇಲ್ಲದೆ ಪ್ರಯಾಣಿಸಿದ್ದ ವ್ಯಕ್ತಿ ರೈಲಿನಲ್ಲಿ ಮಾಡಿದ ಅವಾಂತರವೇನು ನೋಡಿ

ಫೋನಿನಲ್ಲಿ ಮಾತನಾಡುತ್ತಿದ್ದ ವ್ಯಕ್ತಿಯೊಬ್ಬನ ತಲೆಗೆ ವಿಷಕಾರಿ ಹಾವೊಂದು ತಲೆಗೆ ಕಚ್ಚಿದ ಘಟನೆಯೊಂದು ಕೆಲವು ದಿನಗಳ ಹಿಂದೆ ನಡೆದಿತ್ತು. ಆದರೆ ಟೋಪಿ ಧರಿಸಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ನೆಟ್ಟಿಗರು ಆ ವ್ಯಕ್ತಿಯನ್ನು ಅದೃಷ್ಟಶಾಲಿ ಎಂದು ಕರೆದಿದ್ದರು. ಆತ ಫೋನ್‍ನಲ್ಲಿ ಮಾತನಾಡುತ್ತಿರುವಾಗ ವಿಷಕಾರಿ ಹಾವೊಂದು ಬೇಲಿಯಿಂದ ಮೇಲೆ ಹತ್ತಿ ಬಂದು ವ್ಯಕ್ತಿಯ ತಲೆಗೆ ಕಚ್ಚಿದೆ. ಆದರೆ ಆತ ತಲೆಗೆ ಟೋಪಿ ಧರಿಸಿದ್ದರಿಂದ ಅಪಾಯದಿಂದ ಪಾರಾಗಿದ್ದ. ಹಾವಿನ ಹಲ್ಲಿಗೆ ಆ ಟೋಪಿ ಸಿಲುಕಿಕೊಂಡಿದ್ದರಿಂದ ಆ ವ್ಯಕ್ತಿಗೆ ಯಾವುದೇ ಹಾನಿಯಾಗಿರಲಿಲ್ಲ.