ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Viral Video: ವಿದ್ಯಾರ್ಥಿ ಸಂಘದ ನಾಯಕನ ಮೇಲೆ ಡೆಡ್ಲಿ ಅಟ್ಯಾಕ್‌! ಶಾಕಿಂಗ್‌ ವಿಡಿಯೊ ಇಲ್ಲಿದೆ

ವಿದ್ಯಾರ್ಥಿ ಸಂಘದ ಅಧ್ಯಕ್ಷ ಶುಭಂ ಮಲಿಕ್ ಎಂಬಾತನ ಮೇಲೆ ಸ್ಥಳೀಯ ಗೂಂಡಾ ಸಿದ್ಧಾರ್ಥ್ ಕ್ರೂರವಾಗಿ ದಾಳಿ ನಡೆಸಿದ್ದು, ಇದರಿಂದ ಆತನ ಸ್ಥಿತಿ ಗಂಭೀರವಾಗಿದೆ. ಈ ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಈಗ ವೈರಲ್(Viral Video)ಆಗಿದೆ.

ವಿದ್ಯಾರ್ಥಿ ಸಂಘದ ನಾಯಕನ ಮೇಲೆ ಡೆಡ್ಲಿ ಅಟ್ಯಾಕ್‌! ವೈರಲ್‌ ವಿಡಿಯೊ

Profile pavithra May 14, 2025 12:53 PM

ಲಖನೌ: ಉತ್ತರ ಪ್ರದೇಶದ ಮೀರತ್‌ನಲ್ಲಿರುವ ಚೌಧರಿ ಚರಣ್ ಸಿಂಗ್ ವಿಶ್ವವಿದ್ಯಾಲಯದ (ಸಿಸಿಎಸ್‌ಯು) ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶುಭಂ ಮಲಿಕ್ ಎಂಬಾತನನ್ನು ಸ್ಥಳೀಯ ಗೂಂಡಾಗಳು ಕ್ರೂರವಾಗಿ ಥಳಿಸಿದ್ದು, ನಂತರ ಈ ಆಘಾತಕಾರಿ ಘಟನೆ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಭದ್ರತಾ ಸಿಬ್ಬಂದಿ ಮತ್ತು ಇತರ ವಿದ್ಯಾರ್ಥಿಗಳ ಮುಂದೆ ಈ ದಾಳಿ ನಡೆದಿದೆ ಎನ್ನಲಾಗಿದೆ. ಈ ಘಟನೆಯನ್ನು ನೋಡುಗರೊಬ್ಬರು ರೆಕಾರ್ಡ್ ಮಾಡಿ, ವಿಡಿಯೊವನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಇದು ಈಗ ವೈರಲ್(Viral Video)ಆಗಿದೆ.

ವೈರಲ್ ಆದ ವಿಡಿಯೊದಲ್ಲಿ ವಿದ್ಯಾರ್ಥಿ ಸಂಘದ ಅಧ್ಯಕ್ಷನನ್ನು ಗೂಂಡಾಗಳು ಥಳಿಸುವುದು ರೆಕಾರ್ಡ್ ಆಗಿದೆ. ದಾಳಿಯ ಪ್ರಮುಖ ಆರೋಪಿಯನ್ನು ಸಿದ್ಧಾರ್ಥ್ ಕಸನ ಎಂದು ಗುರುತಿಸಲಾಗಿದ್ದು, ಈತ ಸ್ಥಳೀಯ ಗೂಂಡಾ ಎಂದು ತಿಳಿದುಬಂದಿದೆ. ಈ ಘಟನೆಯು ಜಿಲ್ಲೆಯ ಕಾನೂನು ಸುವ್ಯವಸ್ಥೆಯ ಬಗ್ಗೆ ಗಂಭೀರ ಕಳವಳವನ್ನು ಹುಟ್ಟುಹಾಕಿದೆ.

ವಿಡಿಯೊ ಇಲ್ಲಿದೆ ನೋಡಿ...



ಶುಭಂ ಮಲಿಕ್ ಮೇಲೆ ಕಬ್ಬಿಣದ ರಾಡ್‍ನಿಂದ ಹಲ್ಲೆ ನಡೆಸಿ ಕ್ರೂರವಾಗಿ ಥಳಿಸಲಾಯಿತು. ಹೀಗಾಗಿ ಅವನ ತಲೆಗೆ ಗಂಭೀರ ಗಾಯಗಳಾಗಿದ್ದು, ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆದರೆ ಅವನ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಆಘಾತಕಾರಿ ವಿಚಾರವೆಂದರೆ ವಿಶ್ವವಿದ್ಯಾಲಯದ ಭದ್ರತಾ ಸಿಬ್ಬಂದಿಯ ಎದುರೆ ದಾಳಿ ನಡೆದರೂ ಯಾರೂ ಅದನ್ನು ತಡೆಯಲಿಲ್ಲ ಎನ್ನಲಾಗಿದೆ.

ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೊ ವೈರಲ್ ಆಗಿದ್ದು, ವಿಡಿಯೊದಲ್ಲಿ ಕಂಡುಬಂದ ಭದ್ರತಾ ಸಿಬ್ಬಂದಿಯನ್ನು ಪೊಲೀಸ್ ಎಂದು ತಿಳಿದು ಸೋಶಿಯಲ್ ಮೀಡಿಯಾ ನೆಟ್ಟಿಗರು ಪೊಲೀಸರನ್ನು ಟೀಕಿಸಲು ಶುರುಮಾಡಿದ್ದಾರೆ. ಆದರೆ, ವೈರಲ್ ವಿಡಿಯೊದಲ್ಲಿ ಕಾಣುವ ವ್ಯಕ್ತಿ ಪೊಲೀಸ್ ಸಿಬ್ಬಂದಿ ಅಲ್ಲ, ಬದಲಾಗಿ ವಿಶ್ವವಿದ್ಯಾಲಯದ ಭದ್ರತಾ ಸಿಬ್ಬಂದಿ ಎಂದು ಪೊಲೀಸರು ನಂತರ ಸ್ಪಷ್ಟಪಡಿಸಿದ್ದಾರೆ.

ಘಟನೆಯ ನಂತರ, ಮೀರತ್ ಪೊಲೀಸರು ಆರೋಪಿಗಳ ವಿರುದ್ಧ ಕೊಲೆಯತ್ನ ಪ್ರಕರಣವನ್ನು ದಾಖಲಿಸಿದ್ದಾರೆ. ಆರೋಪಿಗಳನ್ನು ಬಂಧಿಸಲು ಎರಡು ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಘಟನೆಯಲ್ಲಿ ಭಾಗಿಯಾಗಿರುವ ಇತರರನ್ನು ಗುರುತಿಸಲು ಸಿಸಿಟಿವಿ ದೃಶ್ಯಾವಳಿಗಳು ಮತ್ತು ವೈರಲ್ ವಿಡಿಯೊಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ದೃಢಪಡಿಸಿದ್ದಾರೆ.

ಈ ಸುದ್ದಿಯನ್ನೂ ಓದಿ:Viral Video: ಮಗಳಿಗೆ ಕಿರುಕುಳ ನೀಡಿದ ಯುವಕನಿಗೆ ಚಪ್ಪಲಿ ಸೇವೆ; ಈ ಮಹಾತಾಯಿಯ ವಿಡಿಯೊ ವೈರಲ್!

ಘಟನೆ ನಡೆದಾಗಿನಿಂದ ವಿಶ್ವವಿದ್ಯಾಲಯದ ಆವರಣದೊಳಗೆ ಪರಿಸ್ಥಿತಿ ಉದ್ವಿಗ್ನವಾಗಿದೆ. ವಿಶ್ವವಿದ್ಯಾಲಯದ ಆವರಣದೊಳಗೆ ಉತ್ತಮ ಭದ್ರತೆ ನೀಡುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ವಿದ್ಯಾರ್ಥಿಗಳನ್ನು ರಕ್ಷಿಸುವಲ್ಲಿ ವಿಫಲವಾಗಿರುವುದಕ್ಕೆ ವಿಶ್ವವಿದ್ಯಾಲಯ ಆಡಳಿತ ಮತ್ತು ಪೊಲೀಸರನ್ನು ಅನೇಕ ವಿದ್ಯಾರ್ಥಿಗಳು ದೂಷಿಸುತ್ತಿದ್ದಾರೆ. ಘಟನೆಯಲ್ಲಿ ಭಾಗಿಯಾದವರ ವಿರುದ್ಧ ಸಂಪೂರ್ಣ ತನಿಖೆ ಮತ್ತು ಕಠಿಣ ಕ್ರಮ ಕೈಗೊಳ್ಳುವುದಾಗಿ ವಿಶ್ವವಿದ್ಯಾಲಯ ಭರವಸೆ ನೀಡಿದೆ.