Viral Video: ಪಾದಚಾರಿಗಳ ಮೇಲೆ ಏಕಾಏಕಿ ಹರಿದ ಟ್ರಕ್! ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
Horrific accident: ಇಂದೋರ್ ನ ಜನನಿಬಿಡ ರಸ್ತೆಯಲ್ಲಿ ವೇಗವಾಗಿ ಬಂದ ಟ್ರಕ್ ಪಾದಚಾರಿಗಳು ಮತ್ತು ಆಟೋರಿಕ್ಷಾಗಳು ಸೇರಿದಂತೆ ಹಲವು ವಾಹನಗಳಿಗೆ ಡಿಕ್ಕಿಯಾಗಿರುವ ಭೀಕರ ದೃಶ್ಯಗಳು ಸಿಸಿಟಿವಿ ಕೆಮರಾದಲ್ಲಿ ಸೆರೆಯಾಗಿದೆ. ಈ ಘಟನೆ ಸೋಮವಾರ ರಾತ್ರಿ 7.11 ರ ಸುಮಾರಿಗೆ ನಡೆದಿದೆ. ಅಪಘಾತದಿಂದ ಮೂವರು ಸಾವನ್ನಪ್ಪಿದ್ದು, ಸುಮಾರು ಒಂಬತ್ತು ಮಂದಿಗೆ ಗಂಭೀರ ಗಾಯಗಳಾಗಿವೆ.

-

ಇಂದೋರ್: ಭಯಾನಕ ಟ್ರಕ್ ಅವಘಡವೊಂದು (truck accident) ಇಂದೋರ್ ನಲ್ಲಿ (Indore) ನಡೆದಿದೆ. ಇದರ ಭೀಕರ ದೃಶ್ಯಗಳು ಟ್ರಕ್ ಕೆಮರಾ ಹಾಗೂ ಸುತ್ತಮುತ್ತಲಿನ ಸಿಸಿಟಿವಿ ಕೆಮರಾದಲ್ಲಿ (Viral Video) ಸೆರೆಯಾಗಿದೆ. ಜನನಿಬಿಡ ರಸ್ತೆಯಲ್ಲಿ ವೇಗವಾಗಿ ಬಂದ ಟ್ರಕ್ ಪಾದಚಾರಿಗಳು ಮತ್ತು ಆಟೋರಿಕ್ಷಾಗಳು ಸೇರಿದಂತೆ ಹಲವು ವಾಹನಗಳಿಗೆ ಡಿಕ್ಕಿಯಾಗಿದೆ. ಸೋಮವಾರ ತಡರಾತ್ರಿ ಈ ಘಟನೆ ನಡೆದಿದ್ದು, ಮೂವರು ಸಾವನ್ನಪ್ಪಿದ್ದಾರೆ. ಸುಮಾರು ಒಂಬತ್ತು ಮಂದಿಗೆ ಗಂಭೀರ ಗಾಯಗಳಾಗಿವೆ. ಈ ಕುರಿತು ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಸಂತೋಷ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಸಿಸಿಟಿವಿ ಕೆಮರಾದಲ್ಲಿ ಸೆರೆಯಾಗಿರುವ ಅಪಘಾತದ ದೃಶ್ಯವು ಸುಮಾರು 30 ಸೆಕೆಂಡುಗಳ ಕಾಲವಿದೆ. ಇದರಲ್ಲಿ ಜನನಿಬಿಡ ರಸ್ತೆಯಲ್ಲಿ ರಾತ್ರಿ 7.11 ರ ಸುಮಾರಿಗೆ, ಟ್ರಕ್ ಒಂದು ಆಟೋರಿಕ್ಷಾ ಮತ್ತು ಇತರ ವಾಹನಗಳಿಗೆ ಡಿಕ್ಕಿ ಹೊಡೆದಿರುವುದನ್ನು ಕಾಣಬಹುದು. ನಿಯಂತ್ರಣ ತಪ್ಪಿದ ಟ್ರಕ್ ಎದುರಿಗೆ ಸಿಕ್ಕ ವಾಹನಗಳಿಗೆ ಡಿಕ್ಕಿಯಾಗಿದೆ. ಇದನ್ನು ನೋಡಿ ಹೆದರಿದ ಪಾದಚಾರಿಗಳು ರಸ್ತೆ ಬದಿಗೆ ಸರಿಯುತ್ತಿವುದು ಕೂಡ ಕೆಮರಾದಲ್ಲಿ ಸೆರೆಯಾಗಿದೆ.
ಇಂದೋರ್‌ನ ಏರೋಡ್ರೋಮ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಅಪಘಾತದಿಂದ ಟ್ರಕ್‌ನ ಮುಂಭಾಗಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಅದರಲ್ಲಿ ಒಂದು ಬೈಕ್, ಕಾರು ಸಿಕ್ಕಿಕೊಂಡಿತ್ತು. ಪ್ರಕರಣಕ್ಕೆ ಸಂಬಂಧಿಸಿ ಟ್ರಕ್ ಚಾಲಕನನ್ನು ಬಂಧಿಸಲಾಗಿದೆ. ವಿಚಾರಣೆ ನಡೆಸಲಾಗುತ್ತಿದೆ. ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 11 ಮಂದಿ ಗಾಯಗೊಂಡಿದ್ದಾರೆ. ಅವರಲ್ಲಿ ಮೂರು ನಾಲ್ಕು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇವರಿಗೆಲ್ಲ ಪ್ರಾಥಮಿಕ ಚಿಕಿತ್ಸೆ ನೀಡಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತದೆ ಎಂದು ಆಸ್ಪತ್ರೆಗಳಿಗೆ ಭೇಟಿ ನೀಡಿದ ಪೊಲೀಸ್ ಆಯುಕ್ತ ಸಂತೋಷ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
Truck runs over people in Indore, set ablaze by mob; several feared dead#indoreaccident #Indore pic.twitter.com/OTAQMmV1AF
— Anil Thakur (अनिल ठाकुर) (@Anil_NDTV) September 15, 2025
ಅಪಘಾತದ ಕಾರಣವನ್ನು ತನಿಖೆ ನಡೆಸಲಾಗುತ್ತಿದೆ. ಜೊತೆಗೆ ಗಾಯಾಳುಗಳಿಗೆ ಸರಿಯಾದ ಚಿಕಿತ್ಸೆ ನೀಡುತ್ತಿರುವ ಬಗ್ಗೆಯೂ ಪರಿಶೀಲನೆ ನಡೆಸುತ್ತಿರುವುದಾಗಿ ಸಿಂಗ್ ಹೇಳಿದರು. ಇಂದೋರ್ ಮೇಯರ್ ಪುಷ್ಯಮಿತ್ರ ಭಾರ್ಗವ್ ಅವರು ಆಸ್ಪತ್ರೆಗಳಿಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯವನ್ನು ವಿಚಾರಿಸಿದರು.
ಇದನ್ನೂ ಓದಿ: Murder Case: ಎಂಥಾ ತಾಯಿ ಈಕೆ! 7 ವರ್ಷದ ಮಗಳನ್ನು 3ನೇ ಮಹಡಿಯಿಂದ ನೂಕಿ ಕೊಂದಳು!
ಜನದಟ್ಟಣೆಯ ರಸ್ತೆಯಲ್ಲಿ ಭಾರೀ ವಾಣಿಜ್ಯ ವಾಹನಗಳನ್ನು ಅನುಮತಿ ಇಲ್ಲ. ರಸ್ತೆ ಜಂಕ್ಷನ್‌ಗಳಲ್ಲಿ ಸಂಚಾರ ಪೊಲೀಸ್ ಸಿಬ್ಬಂದಿ ಇದ್ದರೂ ಟ್ರಕ್ ಬಂದಿದ್ದು ಹೇಗೆ ಎಂದು ಪ್ರಶ್ನಿಸಿದ ಜನ ಸಮೂಹ ಪೊಲೀಸರು ಮತ್ತು ಆಡಳಿತದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದರು.