ಫೋಟೋ ಗ್ಯಾಲರಿ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Viral Video: ಹಾಡಹಗಲೇ ಅಣ್ಣನನ್ನು ಕಬ್ಬಿಣದ ರಾಡ್‍ನಿಂದ ಹೊಡೆದು ಕೊಂದ ತಮ್ಮ- ಬೆಚ್ಚಿ ಬೀಳಿಸುವ ವಿಡಿಯೊ ವೈರಲ್!

ಮಹಾರಾಷ್ಟ್ರದ ಪಿಂಪಲ್‍ಗಾಂವ್‍ನ ಯವತ್ಮಾಲ್ ಪಟ್ಟಣದ ರಸ್ತೆಯ ಮಧ್ಯದಲ್ಲಿ ಹಾಡಹಗಲೇ ಸಹೋದರ 34 ವರ್ಷದ ಕವಿವರ್‌ ಎಂಬಾತ ತನ್ನ ಹಿರಿಯ ಸಹೋದರ 35 ವರ್ಷದ ಪ್ರಮೋದ್ ಪೆಂಡೋರ್ ಎಂಬಾತನನ್ನು ಕಬ್ಬಿಣದ ರಾಡ್‍ನಿಂದ ಹೊಡೆದು ಕ್ರೂರವಾಗಿ ಕೊಂದಿದ್ದಾನೆ. ಈ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದೆ. ಕೌಟುಂಬಿಕ ಕಲಹವೇ ಕೊಲೆಗೆ ಕಾರಣ ಎನ್ನಲಾಗಿದೆ.

ಅಣ್ಣನನ್ನೇ ಕೊಂದ ತಮ್ಮ-ಈ ವಿಡಿಯೊ ನೋಡಿದ್ರೆ ಶಾಕ್‌ ಆಗುತ್ತೆ!

Profile pavithra May 2, 2025 6:25 PM

ಮುಂಬೈ: ಮಹಾರಾಷ್ಟ್ರದ ಪಿಂಪಲ್‍ಗಾಂವ್‍ನಲ್ಲಿ ಭಯಾನಕವಾದ ಘಟನೆಯೊಂದು ನಡೆದಿದ್ದು, ಯವತ್ಮಾಲ್ ಪಟ್ಟಣದ ರಸ್ತೆಯ ಮಧ್ಯದಲ್ಲಿ ಹಾಡಹಗಲೇ ಸಹೋದರನೊಬ್ಬ ತನ್ನ ಹಿರಿಯ ಸಹೋದರನನ್ನು ಕಬ್ಬಿಣದ ರಾಡ್‍ನಿಂದ ಹೊಡೆದು ಕ್ರೂರವಾಗಿ ಕೊಂದಿದ್ದಾನೆ. ಈ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದೆ. ವೈರಲ್ ಆದ ವಿಡಿಯೊದಲ್ಲಿ ಆರೋಪಿಯು ಕಬ್ಬಿಣದ ರಾಡ್ ಹಿಡಿದು ತನ್ನ ಸಹೋದರನನ್ನು ಹೊಡೆಯುವುದು ರೆಕಾರ್ಡ್ ಆಗಿದೆ. ಆದರೆ ರಸ್ತೆಯಲ್ಲಿ ಹೋಗುತ್ತಿದ್ದವರು ಯಾರೂ ಕೂಡ ಈ ಕೃತ್ಯವನ್ನು ತಡೆಯಲು ಮುಂದೆ ಬರಲಿಲ್ಲವಂತೆ.

ವರದಿ ಪ್ರಕಾರ ಮೃತನನ್ನು 35 ವರ್ಷದ ಪ್ರಮೋದ್ ಪೆಂಡೋರ್ ಹಾಗೂ ಆರೋಪಿಯನ್ನು 34 ವರ್ಷದ ಕವಿವರ್‌ ಎಂದು ಗುರುತಿಸಲಾಗಿದೆ. ಘಟನೆ ಬೆಳಕಿಗೆ ಬಂದ ನಂತರ ನಗರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಕೌಟುಂಬಿಕ ಕಲಹವೇ ಕೊಲೆಗೆ ಕಾರಣ ಎನ್ನಲಾಗಿದೆ. ಮೃತನು 2017 ರಲ್ಲಿ ಅಂತರ್ಜಾತೀಯ ಪ್ರೇಮ ವಿವಾಹವಾಗಿ ತನ್ನ ಕುಟುಂಬದಿಂದ ಪ್ರತ್ಯೇಕವಾಗಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದನಂತೆ. ಆದರೆ ಇತ್ತೀಚೆಗೆ ಅವನು ತನ್ನ ಹೆತ್ತವರನ್ನು ಭೇಟಿಯಾಗಲು ಮನೆಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.

ವಿಡಿಯೊ ಇಲ್ಲಿದೆ ನೋಡಿ

ಮಹಾರಾಷ್ಟ್ರದಲ್ಲಿ ಇಂತಹ ಘಟನೆ ನಡೆದಿದ್ದು ಇದೇ ಮೊದಲಲ್ಲ. ಈ ಹಿಂದೆ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯವನ್ನು ವೀಕ್ಷಿಸುತ್ತಿದ್ದ 32 ವರ್ಷದ ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕಬ್ಬಿಣದ ರಾಡ್‍ನಿಂದ ಹೊಡೆದು ತನ್ನ ಕಿರಿಯ ಸಹೋದರನನ್ನು ಕೊಂದು ತಂದೆಯನ್ನು ಗಾಯಗೊಳಿಸಿದ ಘಟನೆ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ನಡೆದಿತ್ತು.

ಈ ಸುದ್ದಿಯನ್ನೂ ಓದಿ:‌Viral Video: ವಿಶ್ವದ ಅತಿ ದೊಡ್ಡ ಮತ್ತು ಅತಿ ಚಿಕ್ಕ ಶ್ವಾನಗಳು ಮುಖಾಮುಖಿ; ಈ ಕ್ಯೂಟ್‌ ವಿಡಿಯೊ ನೋಡಿ

ಅಂಜನ್‌ಗಾಂವ್‌ ಬಾರಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ನಂತರ ಆರೋಪಿಯನ್ನು ಬಂಧಿಸಿದ್ದರು. ಆರೋಪಿಯನ್ನು ಪ್ರವೀಣ್ ಇಂಗೋಲ್ ಎಂದು ಗುರುತಿಸಲಾಗಿದ್ದು, ಭಾರತ ಸೋತಿದ್ದಕ್ಕೆ ಕೋಪಗೊಂಡ ಆತ ತನ್ನ 65 ವರ್ಷದ ತಂದೆ ರಮೇಶ್ ಇಂಗೋಲ್ ಹಾಗೂ 28 ವರ್ಷದ ಸಹೋದರ ಅಂಕಿತ್‍ ಮೇಲೆ ಕಬ್ಬಿಣದ ರಾಡ್ ನಿಂದ ಹಲ್ಲೆ ಮಾಡಿದ್ದಾನೆ. ಈ ಘಟನೆಯಲ್ಲಿ ಸಹೋದರ ಸಾವನಪ್ಪಿದ್ದು ತಂದೆ ಗಾಯಗೊಂಡಿದ್ದರಂತೆ.