ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Viral Video: ಚಲಿಸುತ್ತಿರುವ ಥಾರ್ ಮೇಲೆ ಕುಳಿತು ಯುವತಿಯ ಹುಚ್ಚಾಟ; ಶಾಕಿಂಗ್‌ ವಿಡಿಯೊ ಇಲ್ಲಿದೆ

Woman films reel: ಚಲಿಸುತ್ತಿರುವ ಥಾರ್‌ನ ಛಾವಣಿಯ ಮೇಲೆ ಕುಳಿತ ಯುವತಿಯೊಬ್ಬಳ ರೀಲ್ಸ್ ಹುಚ್ಚಾಟದ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಗುರುಗ್ರಾಮದ ರಾಷ್ಟ್ರೀಯ ಹೆದ್ದಾರಿ-48 ರಲ್ಲಿ ನಡೆದ ಈ ಘಟನೆಯು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಕರಣ ಸಂಬಂಧ ಚಾಲಕ ಹಾಗೂ ಯುವತಿ ವಿರುದ್ಧ ಪ್ರಕರಣ ದಾಖಲಾಗಿದೆ.

ಚಲಿಸುತ್ತಿರುವ ಥಾರ್ ಮೇಲೆ ಕುಳಿತು ಯುವತಿಯ ಹುಚ್ಚಾಟ!

Priyanka P Priyanka P Aug 8, 2025 4:36 PM

ಗುರುಗ್ರಾಮ: ಚಲಿಸುತ್ತಿರುವ ಥಾರ್‌ನ ಛಾವಣಿಯ ಮೇಲೆ ಕುಳಿತ ಯುವತಿಯೊಬ್ಬಳ ರೀಲ್ಸ್ ಹುಚ್ಚಾಟದ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಗುರುಗ್ರಾಮದ ರಾಷ್ಟ್ರೀಯ ಹೆದ್ದಾರಿ-48 ರಲ್ಲಿ ನಡೆದ ಈ ಘಟನೆಯು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ(Viral Video) ಖ್ಯಾತಿಯಾಗಬೇಕು ಎಂದು ಸಂಚಾರ ಉಲ್ಲಂಘಿಸುತ್ತಿರುವುದು ನಿಜಕ್ಕೂ ಕಳವಳಕಾರಿಯಾಗಿದೆ.

ವೈರಲ್ ಆಗಿರುವ ವಿಡಿಯೊದಲ್ಲಿ, ಯುವತಿ ಸನ್‌ರೂಫ್‌ನಿಂದ ಹೊರಬಂದು ಚಲಿಸುತ್ತಿರುವ ಥಾರ್ ವಾಹನದ ಮೇಲೆ ಕುಳಿತುಕೊಳ್ಳುವುದನ್ನು ನೋಡಬಹುದು. ಈಕೆ ರೀಲ್ಸ್ ಮಾಡುತ್ತಿದ್ದರೆ, ವ್ಯಕ್ತಿಯೊಬ್ಬ ವಾಹನ ಚಲಾಯಿಸುತ್ತಿದ್ದ. ಈ ಕೃತ್ಯವು ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಲ್ಲದೆ, ಯುವತಿ, ಚಾಲಕ ಮತ್ತು ಇತರ ಪ್ರಯಾಣಿಕರ ಜೀವಕ್ಕೂ ಅಪಾಯವನ್ನುಂಟುಮಾಡಿದ್ದಾಳೆ. ಆಗಸ್ಟ್ 7 ರಂದು ಡಿಎಲ್ಎಫ್ ಸೆಕ್ಟರ್ -29 ಪೊಲೀಸ್ ಠಾಣೆಯಲ್ಲಿ ಕಾನೂನಿನ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಇಬ್ಬರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣ ದಾಖಲಿಸಿದ ನಂತರ, ಅಪರಾಧಕ್ಕೆ ಬಳಸಲಾದ ಕಾರನ್ನು (ಥಾರ್) ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಗುರುಗ್ರಾಮ ಪೊಲೀಸರು ಅಧಿಕೃತ ಹೇಳಿಕೆಯಲ್ಲಿ ದೃಢಪಡಿಸಿದ್ದಾರೆ.

ವಿಡಿಯೊ ಇಲ್ಲಿದೆ:



ಪ್ರಾಥಮಿಕ ತನಿಖೆಯಲ್ಲಿ ಈ ವಾಹನವು ಸ್ಥಳೀಯ ನಿವಾಸಿಯೊಬ್ಬರಿಗೆ ಸೇರಿದ್ದು, ಘಟನೆ ನಡೆದ ಸಮಯದಲ್ಲಿ ಅವರ ಪುತ್ರ ಅದನ್ನು ಬಳಸುತ್ತಿದ್ದ ಎಂದು ತಿಳಿದುಬಂದಿದೆ. ಪೊಲೀಸರು ನಿವಾಸಕ್ಕೆ ಭೇಟಿ ನೀಡಿದಾಗ ಆ ವ್ಯಕ್ತಿ ಮನೆಯಲ್ಲಿ ಇರಲಿಲ್ಲ. ಆದರೆ ಕೃತ್ಯದಲ್ಲಿ ಭಾಗಿಯಾಗಿರುವ ವ್ಯಕ್ತಿಗಳನ್ನು ಗುರುತಿಸಲು ಮತ್ತು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: Viral Video: ವರದಕ್ಷಿಣೆಗಾಗಿ ಪತ್ನಿ ಮೇಲೆ ಮನಸೋ ಇಚ್ಛೆ ಹಲ್ಲೆ; ವೈರಲ್‌ ಆಯ್ತು ಪತಿಯ ಕ್ರೌರ್ಯ

ಇನ್ನು ಗುರುಗ್ರಾಮ್ ಪೊಲೀಸರು, ಸಾಮಾಜಿಕ ಮಾಧ್ಯಮದ ಖ್ಯಾತಿಗಾಗಿ ಜೀವಕ್ಕೆ ಅಪಾಯವನ್ನುಂಟುಮಾಡುವ ಸಾಹಸಗಳಲ್ಲಿ ತೊಡಗಿಕೊಳ್ಳದಂತೆ ನಿವಾಸಿಗಳನ್ನು ಒತ್ತಾಯಿಸಿದ್ದಾರೆ. ಅಲ್ಲದೆ ಇದರಿಂದ ಕಾನೂನು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.