Sri Ganesh Tel

ಟೆಸ್ಟ್ ಶ್ರೇಯಾಂಕ ಪಟ್ಟಿ; ವಿರಾಟ್ ಗೆ ಬಡ್ತಿ

Posted In : Others

ದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ಐಸಿಸಿ) ಗುರುವಾರ ಬಿಡುಗಡೆ ಗೊಳಿಸಿದ ಟೆಸ್ಟ್ ಬ್ಯಾಟ್ಸ್ ಮನ್ ಗಳ ಶ್ರೇಯಾಂಕ ಪಟ್ಟಿಯಲ್ಲಿ ಭಾರತದ ನಾಯಕ ವಿರಾಟ್ ಕೊಹ್ಲಿ ದ್ವಿತೀಯ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ. ಬುಧವಾರ ಕೊನೆಗೊಂಡ ಶ್ರೀಲಂಕಾ ವಿರುದ್ಧದ ದೆಹಲಿ ಪಂದ್ಯದಲ್ಲಿ ಜೀವನಶ್ರೇಷ್ಠ 243 ರನ್ ಗಳಿಸಿರುವ ಕೊಹ್ಲಿ ಮೂರು ಸ್ಥಾನ ಭಡ್ತಿ ಪಡೆದರು.

ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಕೊಹ್ಲಿ ಮೂರು ಶತಕಗಳ ಸಹಿತ ಒಟ್ಟು 610 ರನ್ ಗಳಿಸಿದ್ದಾರೆ. ಶ್ರೀಲಂಕಾ ವಿರುದ್ಧ ಸರಣಿ ಆರಂಭಕ್ಕೆ ಮೊದಲು ಕೊಹ್ಲಿ, ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್, ಕೇನ್ ವಿಲಿ ಯಮ್ಸನ್, ಚೇತೇಶ್ವರ ಪೂಜಾರ ಹಾಗೂ ಜೋ ರೂಟ್ ಬಳಿಕ 6ನೇ ಸ್ಥಾನ ದಲ್ಲಿದ್ದರು.

ಶ್ರೀಲಂಕಾ ವಿರುದ್ಧ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿರುವ ಕೊಹ್ಲಿ ನಾಲ್ಕು ಸ್ಥಾನ ಬಡ್ತಿ ಪಡೆದು ದ್ವಿತೀಯ ಸ್ಥಾನ ಕ್ಕೇರಿದ್ದಾರೆ. ಆಸ್ಟ್ರೇಲಿಯದ ನಾಯಕ ಸ್ಟೀವ್ ಸ್ಮಿತ್ ಮೊದಲೇ ಸ್ಥಾನ ಕಾಯ್ದುಕೊಂಡಿದ್ದು, ಕೊಹ್ಲಿಗಿಂತ 45 ಅಂಕ ಮುಂದಿದ್ದಾರೆ. ಸ್ಮಿತ್ 938 ಅಂಕ ಗಳಿಸಿದ್ದರೆ, ಕೊಹ್ಲಿ 893 ಅಂಕ ಗಳಿಸಿದ್ದಾರೆ.

ಕೊಹ್ಲಿ ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಯಲ್ಲಿ ಸತತ ದ್ವಿಶತಕ ಸಿಡಿಸಿದ್ದರು. ಕೋಟ್ಲಾ ಮೈದಾನದಲ್ಲಿ ಆರನೇ ಬಾರಿ ದ್ವಿಶತಕ ಸಿಡಿಸಿದ್ದಾರೆ. ಈ ಮೂಲಕ ವಿಂಡೀಸ್ ನ ಬ್ರಿಯಾನ್ ಲಾರಾ ಅವರ ಗರಿಷ್ಠ ದ್ವಿಶತಕದ ದಾಖಲೆಯನ್ನು ಹಿಂದಿಕ್ಕಿದ್ದರು. ಪ್ರಸ್ತುತ ಕೊಹ್ಲಿ ಏಕದಿನ ಹಾಗೂ ಟ್ವೆಂಟಿ-20 ಕ್ರಿಕೆಟಿನಲ್ಲಿ ನಂ.1 ಸ್ಥಾನದಲ್ಲಿದ್ದಾರೆ.

ಭಾರತವು ತಂಡಗಳ ಶ್ರೇಯಾಂಕದಲ್ಲಿ ಒಂದು ಅಂಕ ಕಳೆದುಕೊಂಡರೂ ನಂ.1 ಸ್ಥಾನದಲ್ಲಿ ಮುಂದುವರಿದಿದೆ. ಶ್ರೀಲಂಕಾ ತಂಡ ಟೆಸ್ಟ್ ಸರಣಿಯನ್ನು 0-1 ರಿಂದ ಸೋತರೂ ಆರನೇ ಸ್ಥಾನ ಉಳಿಸಿಕೊಂಡಿದೆ.

Leave a Reply

Your email address will not be published. Required fields are marked *

four × five =

Friday, 15.12.2017

ಶ್ರೀಹೇಮಲಂಭಿ, ದಕ್ಷಿಣಾಯನ, ಹೇಮಂತಋತು, ಮಾರ್ಗಶಿರ ಮಾಸ, ಕೃಷ್ಣ ಪಕ್ಷ , ತ್ರಯೋದಶಿ, ಶುಕ್ರವಾರ, ನಿತ್ಯ ನಕ್ಷತ್ರ-ವಿಶಾಖ, ಯೋಗ-ಸುಕರ್ಮ, ಕರಣ-ಗರಜೆ.

ರಾಹುಕಾಲಗುಳಿಕಕಾಲಯಮಗಂಡಕಾಲ
10.30-12.00 07.30-09.00 03.00-04.30

Read More

 

Friday, 15.12.2017

ಶ್ರೀಹೇಮಲಂಭಿ, ದಕ್ಷಿಣಾಯನ, ಹೇಮಂತಋತು, ಮಾರ್ಗಶಿರ ಮಾಸ, ಕೃಷ್ಣ ಪಕ್ಷ , ತ್ರಯೋದಶಿ, ಶುಕ್ರವಾರ, ನಿತ್ಯ ನಕ್ಷತ್ರ-ವಿಶಾಖ, ಯೋಗ-ಸುಕರ್ಮ, ಕರಣ-ಗರಜೆ.

ರಾಹುಕಾಲಗುಳಿಕಕಾಲಯಮಗಂಡಕಾಲ
10.30-12.00 07.30-09.00 03.00-04.30

Read More

Back To Top