ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Wall collapses: ಮಹಾಮಳೆಗೆ ರಾಜ್ಯದಲ್ಲಿ ಮತ್ತೊಂದು ಬಲಿ; ಗೋಡೆ ಕುಸಿದು ಬಾಲಕ ಸಾವು

ರಾಜ್ಯದಲ್ಲಿ ಮಹಾಮಳೆಗೆ ಮತ್ತೊಂದು ಬಲಿಯಾಗಿದ್ದು, ಕಲಬುರಗಿಯಲ್ಲಿ ಮನೆ ಗೋಡೆ ಕುಸಿದು 10 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಕಲಬುರಗಿಯ ಜೇವರ್ಗಿಯ ಗುಡೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತ ಬಾಲಕನನ್ನು ಶಿವಪ್ಪ (10) ಎಂದು ಗುರುತಿಸಲಾಗಿದೆ. ಭಾಗ್ಯಮ್ಮ ಎಂಬ ಮಹಿಳೆಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ .

ಮನೆ ಗೋಡೆ ಕುಸಿದು ಬಾಲಕ ದಾರುಣ ಸಾವು

Profile Rakshita Karkera Jun 17, 2025 11:05 AM

ಕಲಬುರಗಿ : ರಾಜ್ಯದಲ್ಲಿ ಕಳೆದೊಂದು ವಾರದಿಂದ ವರುಣನ ಅಬ್ಬರಕ್ಕೆ(Rain Updates) ಜನ ತತ್ತರಿಸಿ ಹೋಗಿದ್ದಾರೆ. ಹಲವು ಜಿಲ್ಲೆಗಳಲ್ಲಿ ಈಗಾಗಲೇ ರೆಡ್‌ ಅಲರ್ಟ್‌(Red Alert) ಕೂಡ ಘೋಷಿಸಲಾಗಿದೆ. ಇದೀಗ ರಾಜ್ಯದಲ್ಲಿ ಮಹಾಮಳೆಗೆ ಮತ್ತೊಂದು ಬಲಿಯಾಗಿದ್ದು, ಕಲಬುರಗಿಯಲ್ಲಿ ಮನೆ ಗೋಡೆ ಕುಸಿದು 10 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಕಲಬುರಗಿಯ ಜೇವರ್ಗಿಯ ಗುಡೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತ ಬಾಲಕನನ್ನು ಶಿವಪ್ಪ (10) ಎಂದು ಗುರುತಿಸಲಾಗಿದೆ. ಭಾಗ್ಯಮ್ಮ ಎಂಬ ಮಹಿಳೆಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ .ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಕೆಲವು ದಿನಗಳ ಹಿಂದೆ ಮಂಗಳೂರಿನ ದೇರಳಕಟ್ಟೆ ಸಮೀಪದ ಮೊಂಟೆಪದವು ಕೋಡಿ ಎಂಬಲ್ಲಿ ಗುಡ್ಡ ಕುಸಿದು ಮನೆ ಮೇಲೆ ಕಾಂಪೌಡ್​ ಗೋಡೆ ಬಿದ್ದ ಪರಿಣಾಮ ಬಾಲಕಿ (Girl Death) ಸಾವನ್ನಪ್ಪಿರುವ ಘಟನೆ ನಡೆದಿತ್ತು. ಮತ್ತೊಂದೆಡೆ ಉಳ್ಳಾಲ ತಾಲೂಕಿನ 2 ಕಡೆ ಮನೆಗಳ ಮೇಲೆ ಗುಡ್ಡ ಕುಸಿದಿತ್ತು. ಕಾನಕರೆ ನಿವಾಸಿ ನೌಶಾದ್ ಎಂಬುವರ ಪುತ್ರಿ ನಹೀಮಾ (10) ಮೃತ ಬಾಲಕಿ. ನೌಶಾದ ಅವರ ಮನೆಯ ಹಿಂಬದಿಯ ಕಾಂಪೌಂಡ್ ಗೋಡೆ ಕುಸಿದು ಮನೆ ಮೇಲೆ ಮಣ್ಣು ಬಿದ್ದಿದೆ. ಮನೆಯ ಕಿಟಕಿ ಬಾಲಕಿಯ ಮೇಲೆ ಬಿದ್ದು ಗಂಭೀರ ಗಾಯಗೊಂಡ ಬಾಲಕಿ ನಹೀಮಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಳು.

ಈ ಸುದ್ದಿಯನ್ನೂ ಓದಿ: Karnataka Rain: ಈ ಮಳೆ ಟ್ರೇಲರ್‌ ಮಾತ್ರ, ಇನ್ನೂ 5 ದಿನ ಸುರಿಯಲಿದೆ ಸೈಕ್ಲೋನ್‌ ಮಳೆ!

ಆಸ್ಪತ್ರೆಯ ಗೋಡೆ ಕುಸಿತ; ರೋಗಿಗಳು ಜಸ್ಟ್‌ ಮಿಸ್‌!

ಕರಾವಳಿ ಭಾಗದಲ್ಲಿ ವರುಣಾರ್ಭಟಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದ ಎಡೆಬಿಡದೇ ಒಂದೇ ಸಮನೇ ಮಳೆ ಸುರಿಯುತ್ತಲೇ ಇದೆ. ಇದೀಗ ಮಂಗಳೂರಿನಲ್ಲಿ ಭಾರಿ ಮಳೆಗೆ ಜಲ ಸ್ಫೋಟಗೊಂಡು ಖಾಸಗಿ ಆಸ್ಪತ್ರೆಯ ಗೋಡೆ ಒಂದು ಕುಸಿದು ಬಿದ್ದಿದ್ದು, ಭಾರೀ ಅವಘಡವೊಂದು ಸಂಭವಿಸಿದೆ. ಅದೃಷ್ಟವಶಾತ್‌ ಆಸ್ಪತ್ರೆಯಲ್ಲಿದ್ದ ಕುಟುಂಬವೊಂದು ಪಾರಾಗಿದೆ. ಕಂಕನಾಡಿ ಬಳಿಯ ಸುವರ್ಣ ಲೇನಲ್ಲಿ ಭಾರಿ ಅವಘಡ ಸಂಭವಿಸಿದೆ. ಖಾಸಗಿ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು ಅವಘಡ ಸಂಭವಿಸಿದೆ. ಧಾರಾಕಾರ ಮಳೆಗೆ ಕೊಡಿ ಕುಸಿದು ಮನೆಗಳಿಗೆ ನೀರು ನುಗ್ಗಿದೆ.

ಖಾಸಗಿ ಆಸ್ಪತ್ರೆ ಗೋಡೆ ಕುಸಿತ ಪರಿಣಾಮದಿಂದ ಕೂದಲೆಳೆ ಅಂತರದಲ್ಲಿ ಜ್ಯೋಕಿಂ ಡಿಸೋಜಾ ಎಂಬ ಕುಟುಂಬ ಪಾರಾಗಿದೆ. ಕುಟುಂಬದ ಆರು ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚರ್ಚ್ ಗೆ ಹೊರಡಲು ಮನೆಯಿಂದ ಹೊರ ಬರುತ್ತಿದ್ದಂತೆ ಖಾಸಗಿ ಆಸ್ಪತ್ರೆಯ ಗೋಡೆ ಕುಸಿದಿದೆ. ಅದೃಷ್ಟವಶಾತ್ ಡಿಸೋಜಾ ಕುಟುಂಬ ಪ್ರಾಣಾಪಾಯದಿಂದ ಪಾರಾಗಿದ್ದಾರೆ.