ರಾಜ್ಯಾದ್ಯಂತ ಮೋಡಕವಿದ ವಾತಾವರಣ: ಬೆಂಗಳೂರು, ಕರಾವಳಿಯಲ್ಲಿ ಹಗುರ ಮಳೆ ಸಾಧ್ಯತೆ
ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು (ನವೆಂಬರ್ 9) ಭಾಗಶಃ ಮೋಡಕವಿದ ವಾತಾವರಣವಿರಲಿದ್ದು, ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಸಂಗ್ರಹ ಚಿತ್ರ -
ಬೆಂಗಳೂರು: ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು (ನವೆಂಬರ್ 9) ಭಾಗಶಃ ಮೋಡಕವಿದ ವಾತಾವರಣವಿರಲಿದ್ದು, ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. (Karnataka Weather) ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಕೊಡಗು, ಹಾಸನ, ಮೈಸೂರು ಸೇರಿದಂತೆ ಆರು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ನಿರೀಕ್ಷೆಯಿದೆ.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯಲಿದೆ. ಕರಾವಳಿ ಭಾಗದಲ್ಲಿ ಮೋಡ ಕವಿದ ವಾತಾವರಣದ ನಡುವೆ ಕೆಲವೆಡೆ ತುಂತುರು ಮಳೆಯಾಗುವ ಸಾಧ್ಯತೆಯಿದ್ದು, ಉಳಿದ ಪ್ರದೇಶಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಮುನ್ಸೂಚನೆ ಸದ್ಯಕ್ಕೆ ಇಲ್ಲ.
ದಕ್ಷಿಣ ಒಳನಾಡಿನ ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ರಾಮನಗರ ಮತ್ತು ಮಂಡ್ಯ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.
ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂಬರುವ ದಿನಗಳಲ್ಲಿ ಮಳೆಯ ಚಟುವಟಿಕೆಗಳು ಕ್ಷೀಣಿಸಲಿದ್ದು, ಸಂಪೂರ್ಣ ಒಣ ಹವಾಮಾನ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿದ್ದ ವಾಯುಭಾರ ಕುಸಿತದ ಪ್ರಭಾವ ತಗ್ಗಿರುವುದರಿಂದ ಉತ್ತರ ಕರ್ನಾಟಕ ಭಾಗದಲ್ಲಿ ಚಳಿಯ ತೀವ್ರತೆ ಹೆಚ್ಚಾಗುವ ಮುನ್ಸೂಚನೆ ಇದೆ.