ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka Weather: ಹವಾಮಾನ ವರದಿ; ಇಂದು ಕೂಡ ರಾಜ್ಯದಲ್ಲಿ ಮುಂದುವರಿಯಲಿದೆ ಒಣ ಹವೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ: ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29°C ಮತ್ತು 18°C ಇರುವ ಸಾಧ್ಯತೆ ಇದೆ. ನ.6ರವರೆಗಿನ ರಾಜ್ಯದ ಹವಾಮಾನ ವರದಿ ಕುರಿತ ಮಾಹಿತಿ ಇಲ್ಲಿದೆ.

ಹವಾಮಾನ ವರದಿ; ಇಂದು ಕೂಡ ರಾಜ್ಯದಲ್ಲಿ ಮುಂದುವರಿಯಲಿದೆ ಒಣ ಹವೆ

-

Prabhakara R Prabhakara R Nov 1, 2025 6:00 AM

ಬೆಂಗಳೂರು, ನ.1: ರಾಜ್ಯದಲ್ಲಿ ಕಳೆದ ಎರಡ್ಮೂರು ದಿನಗಳಿಂದ ಹಿಂಗಾರು ಮಳೆ ಅಬ್ಬರ ಕಡಿಮೆಯಾಗಿದೆ. ಅದೇ ರೀತಿ ಮುಂದಿನ ಎರಡು ದಿನ ರಾಜ್ಯದಲ್ಲಿ ಒಣ ಹವೆ ವಾತಾವರಣ (Karnataka Weather) ಮುಂದುವರಿಯಲಿದ್ದು, ನಂತರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹಾಗೆಯೇ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ: ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29°C ಮತ್ತು 18°C ಇರುವ ಸಾಧ್ಯತೆ ಇದೆ.

ನ.1ರಂದು ಕರಾವಳಿ, ಉತ್ತರ ಒಳನಾಡಿನ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ನ.2ರಂದು ಕೂಡ ಇದೇ ರೀತಿಯ ವಾತಾವರಣ ಮುಂದುವರಿಯಲಿದೆ.

ಇನ್ನು ನ. 3ರಂದು ಕರಾವಳಿ ಜಿಲ್ಲೆಗಳಲ್ಲಿ ಒಣ ಹವೆ ಇರಲಿದ್ದು, ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಕೆಲ ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ವಿಜಯನಗರ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಒಂದೆರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ನ.4ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ನ. 5 ಮತ್ತು 6ರಂದು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ, ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ ಮಳೆಯಾಗುವ ಸಾಧ್ಯತೆ ಇದೆ.

ಈ ಸುದ್ದಿಯನ್ನೂ ಓದಿ : Monsoon Lipsticks 2025: ಮಾನ್ಸೂನ್‌ಗೆ ಕಾಲಿಟ್ಟ ವೈವಿಧ್ಯಮಯ ವಾಟರ್ ಪ್ರೂಫ್ ಲಿಪ್‌ಸ್ಟಿಕ್ಸ್

ಮೈಸೂರಿನಲ್ಲಿ ಅತಿ ಕನಿಷ್ಠ ತಾಪಮಾನ ದಾಖಲು

ರಾಜ್ಯದಲ್ಲಿ ಗುರುವಾರ ಹೊನ್ನಾವರದಲ್ಲಿ ಗರಿಷ್ಠ ತಾಪಮಾನ 31.6°C ದಾಖಲಾಗಿದೆ. ಹಾಗೆಯೇ ರಾಜ್ಯದ ಸಮತಟ್ಟಾದ ಪ್ರದೇಶಗಲ್ಲಿ ಮೈಸೂರಿನಲ್ಲಿ ಅತಿ ಕನಿಷ್ಠ ತಾಪಮಾನ 17.0°C ಮೈಸೂರು ದಾಖಲಾಗಿದೆ.