ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ದಕ್ಷಿಣ ಒಳನಾಡಲ್ಲಿ 2 ದಿನ ಭಾರಿ ಮಳೆ ನಿರೀಕ್ಷೆ; ಹವಾಮಾನ ಇಲಾಖೆ ಎಚ್ಚರಿಕೆ

ರಾಜ್ಯದಲ್ಲಿ ನೈಋತ್ಯ ಮುಂಗಾರು ಸದ್ಯಕ್ಕೆ ದುರ್ಬಲ ಸ್ಥಿತಿಯಲ್ಲಿದೆ. ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಿದೆ. ಮತ್ತೊಂದೆಡೆ, ಉತ್ತರ ಒಳನಾಡಿನಲ್ಲಿ ಸಂಪೂರ್ಣವಾಗಿ ಒಣ ಹವಾಮಾನ ಮುಂದುವರೆದಿದ್ದು, ರಾಜ್ಯದಲ್ಲಿ ಮಳೆಯ ಪ್ರಮಾಣ ತಗ್ಗಿದೆ. ಕರಾವಳಿ ಜಿಲ್ಲೆ ಸೇರಿ ಮುಂದಿನ 4 ದಿನಗಳ ಕಾಲ ರಾಜ್ಯಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಸಾಧಾರಣೆ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಲ್ಲಿ 2 ದಿನ ಭಾರಿ ಮಳೆ ನಿರೀಕ್ಷೆ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Jun 16, 2026 8:53 AM

ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮುಂಗಾರು ಸದ್ಯಕ್ಕೆ ದುರ್ಬಲ ಸ್ಥಿತಿಯಲ್ಲಿದೆ. ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ (Karnataka Weather) ಸಾಧಾರಣ ಮಳೆಯಾಗಿದೆ. ಮತ್ತೊಂದೆಡೆ, ಉತ್ತರ ಒಳನಾಡಿನಲ್ಲಿ ಸಂಪೂರ್ಣವಾಗಿ ಒಣ ಹವಾಮಾನ ಮುಂದುವರೆದಿದ್ದು, ರಾಜ್ಯದಲ್ಲಿ ಮಳೆಯ ಪ್ರಮಾಣ ತಗ್ಗಿದೆ. ಕರಾವಳಿ ಜಿಲ್ಲೆ ಸೇರಿ ಮುಂದಿನ 4 ದಿನಗಳ ಕಾಲ ರಾಜ್ಯಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಸಾಧಾರಣೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನ ಕೆಲವೆಡೆ ಸಂಜೆ ವೇಳೆಗೆ ಹಗುರ ಮಳೆಯಾಗಲಿದೆ ಎಂದು ಇಲಾಖೆ ವರದಿ ಮಾಡಿದೆ.

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬುಧವಾರ ಮತ್ತು ಗುರುವಾರ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ಅವಧಿಯಲ್ಲಿ ಬಹುತೇಕ ಕಡೆ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗಲಿದೆ. ದಕ್ಷಿಣ ಒಳನಾಡು ಕರ್ನಾಟಕದಲ್ಲಿಯೂ ಗುರುವಾರದವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

, ಉಡುಪಿ ಜಿಲ್ಲೆಯ ಕೋಟದಲ್ಲಿ ಅತಿ ಹೆಚ್ಚು, ಅಂದರೆ 11 ಸೆಂ.ಮೀ ಮಳೆಯಾಗಿರುವುದು ಕಳೆದ ದಿನ ರಾಜ್ಯದಲ್ಲಿ ಸುರಿದ ಅತಿ ಹೆಚ್ಚು ಮಳೆಯಾಗಿದೆ. ಅದರಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ 9 ಸೆಂ.ಮೀ ಮಳೆಯಾದರೆ, ಉಡುಪಿಯ ಬ್ರಹ್ಮಾವರದಲ್ಲಿ ಮತ್ತು ಬೆಂಗಳೂರು ನಗರದ ಟಿ.ಜಿ. ಹಳ್ಳಿಯಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಕೊನೆಯದಾಗಿ ದಕ್ಷಿಣ ಕನ್ನಡದ ಶಕ್ತಿನಗರ ಹಾಗೂ ಮೂಡುಬಿದಿರೆಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ರಾಜ್ಯದಲ್ಲಿಯೇ ಅತಿ ಹೆಚ್ಚು ಗರಿಷ್ಠ ತಾಪಮಾನವು ಕಲಬುರಗಿಯಲ್ಲಿ 37.4°C ದಾಖಲಾಗಿದೆ.

ರಾಜ್ಯದ ಹಲವೆಡೆ ಮಳೆ ಕೊರತೆ

ಎಲ್ ನಿನೋ (El Nino) ಮಾರಕ ಪರಿಣಾಮದಿಂದಾಗಿ ದೇಶಾದ್ಯಂತ ಮಳೆ ಕೊರತೆ ಉಂಟಾಗಿದೆ. ಜೂನ್ 1 ರಿಂದ ಜೂನ್ 15 ರವರೆಗಿನ ಅವಧಿಯಲ್ಲಿ ದೇಶದ ಶೇಕಡಾ 65 ರಷ್ಟು ಭಾಗದಲ್ಲಿ ಭಾರಿ ಮಳೆ ಕೊರತೆಯಾಗಿದ್ದು, ಒಟ್ಟಾರೆ ಶೇಕಡಾ 32 ರಷ್ಟು ಇಳಿಕೆ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಹಲವು ಹಲವು ಜಿಲ್ಲೆಗಳಲ್ಲಿ ಮುಂಗಾರು ಚುರುಕುಗೊಳ್ಳದ ಕಾರಣ ಬಿತ್ತನೆ ಕಾರ್ಯ ಸಂಪೂರ್ಣ ಸ್ಥಗಿತಗೊಂಡಿದೆ. ಅರಬ್ಬಿ ಸಮುದ್ರದಿಂದ ಬರುತ್ತಿರುವ ಗಾಳಿಯಲ್ಲಿ ಸಾಕಷ್ಟು ತೇವಾಂಶ ಇಲ್ಲದ ಕಾರಣ ನಿರೀಕ್ಷಿತ ಪ್ರಮಾಣದ ಮಳೆಯಾಗುತ್ತಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.