ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿಂದು ಭಾರಿ ಮಳೆ ಮುನ್ಸೂಚನೆ
Karnataka weather: ಆಗಸ್ಟ್ ತಿಂಗಳಿನಲ್ಲಿ ರಾಜ್ಯಾದ್ಯಂತ ಮಳೆಯಬ್ಬರ ಹೆಚ್ಚಿದ್ದು, ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ ಪ್ರಕಾರ, ವಿಶೇಷವಾಗಿ ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಿದೆ.
ಸಂಗ್ರಹ ಚಿತ್ರ -
ಬೆಂಗಳೂರು: ಆಗಸ್ಟ್ ತಿಂಗಳಿನಲ್ಲಿ ರಾಜ್ಯಾದ್ಯಂತ ಮಳೆಯಬ್ಬರ ಹೆಚ್ಚಿದ್ದು, ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ ಪ್ರಕಾರ, (Karnataka weather) ವಿಶೇಷವಾಗಿ ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಜನರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ದಕ್ಷಿಣ ಒಳನಾಡು ಕರ್ನಾಟಕದ ಮೈಸೂರು, ಮಂಡ್ಯ, ಹಾಸನ, ಕೊಡಗು, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಶಿವಮೊಗ್ಗ, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಗಂಟೆಗೆ 30–40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ.
ಕೆಲವು ಪ್ರದೇಶಗಳಲ್ಲಿ ಗುಡುಗು-ಮಿಂಚಿನೊಂದಿಗೆ ಜೋರಾದ ಮಳೆಯಾಗುವ ಸಾಧ್ಯತೆ ಇರುವುದರಿಂದ ಮೀನುಗಾರರು ಹಾಗೂ ಸಮುದ್ರ ತೀರದ ನಿವಾಸಿಗಳು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ. ಮಲೆನಾಡು ಜಿಲ್ಲೆಗಳಾದ ಕೊಡಗು, ಶಿವಮೊಗ್ಗ ಹಾಗೂ ಚಿಕ್ಕಮಗಳೂರಿನಲ್ಲಿ ಉತ್ತಮ ಮಳೆಯಾಗಲಿದೆ. ಉತ್ತರ ಒಳನಾಡು ಕರ್ನಾಟಕದ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲ ಪ್ರದೇಶಗಳಲ್ಲಿ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಹೆಚ್ಚಿದೆ.
Karnataka Weather: ಇಂದು ಬೆಂಗಳೂರು, ಕರಾವಳಿ ಸೇರಿ ವಿವಿಧೆಡೆ ಸುರಿಯಲಿದೆ ಮಳೆ; ನಿಮ್ಮೂರಿನ ಹವಾಮಾನ ಹೇಗಿರಲಿದೆ?
ಆಗಸ್ಟ್ 6ರಂದು ಕೂಡ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ಕೊಪ್ಪಳ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.