ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಬೆಂಗಳೂರಿನಲ್ಲಿಂದು ಭಾರೀ ಮಳೆ ಮುನ್ಸೂಚನೆ; ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಚುರುಕಾಗಿದ್ದು, ರಾಜ್ಯದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (Weather) ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿಂದು ಭಾರೀ ಮಳೆ ಮುನ್ಸೂಚನೆ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar May 31, 2026 9:01 AM

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಚುರುಕಾಗಿದ್ದು, ರಾಜ್ಯದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (Karnataka Weather) ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವರುಣನ ಆರ್ಭಟ ಹೆಚ್ಚಿರಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಾಮರಾಜನಗರ, ಹಾಸನ, ಕೊಡಗು, ಮೈಸೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.

ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಬಳ್ಳಾರಿ, ವಿಜಯನಗರ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲೂ ಗಾಳಿ ಸಹಿತ ಸಾಧಾರಣ ಮಳೆಯಾಗಬಹುದು. ಕರಾವಳಿ ತೀರದ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯ ಕೆಲವು ಕಡೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಉತ್ತರ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ ಹಗುರವಾದ ಮಳೆಯಾಗಲಿದೆ.

ಮುಂಗಾರು ಆಗಮನ ತಡ

ಭಾರತೀಯ ಹವಾಮಾನ ಇಲಾಖೆ (IMD) ದಕ್ಷಿಣ-ಪಶ್ಚಿಮ ಮುಂಗಾರು ಮಳೆಯ ಮುನ್ಸೂಚನೆಯನ್ನು ಪರಿಷ್ಕರಿಸಿದ್ದು, ಈ ವರ್ಷದ ಹಂಗಾಮಿ ಮಳೆಯ ಪ್ರಮಾಣವನ್ನು ದೀರ್ಘಾವಧಿ ಸರಾಸರಿ (LPA)ಯ ಶೇ. 92 ರಿಂದ ಶೇ. 90ಕ್ಕೆ ಇಳಿಸಿದೆ. ಇದರ ಪರಿಣಾಮವಾಗಿ ಜೂನ್ ತಿಂಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯ ಜೊತೆಗೆ ಹೆಚ್ಚುವರಿ ಉಷ್ಣ ಅಲೆ (ಹೀಟ್‌ವೇವ್) ದಿನಗಳು ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಇಲಾಖೆ ಎಚ್ಚರಿಸಿದೆ. 2026ರ ಜೂನ್‌ನಿಂದ ಸೆಪ್ಟೆಂಬರ್‌ವರೆಗೆ ಇರುವ ದಕ್ಷಿಣ-ಪಶ್ಚಿಮ ಮುಂಗಾರು ಮಳೆಯ ಎರಡನೇ ಹಂತದ ದೀರ್ಘಾವಧಿ ಮುನ್ಸೂಚನೆಯಲ್ಲಿ, ದೇಶದ ಪ್ರಮುಖ ಮುಂಗಾರು ವಲಯಕ್ಕೆ ಸೇರಿರುವ ಬಹುತೇಕ ಭೂಭಾಗಗಳಲ್ಲಿ ದೀರ್ಘಾವಧಿಯ ಸರಾಸರಿ (LPA) 90 ಶೇಕಡಾ ಮಳೆಯಾಗಲಿದೆ ಎಂದು IMD ತಿಳಿಸಿದೆ.