ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಮುಂದಿನ ಕೆಲವು ದಿನಗಳ ಕಾಲ ಮಳೆ ಹಾಗೂ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಮೂರು ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ.

ರಾಜ್ಯದಲ್ಲಿ ಇಂದು ಈ ಜಿಲ್ಲೆಗಳಲ್ಲಿ ಭಾರಿ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Jul 19, 2026 8:08 AM

ಬೆಂಗಳೂರು: ರಾಜ್ಯಾದ್ಯಂತ ಮುಂದಿನ ಕೆಲವು ದಿನಗಳ ಕಾಲ ಮಳೆ ಹಾಗೂ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು (Karnataka Weather) ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಮೂರು ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ಮಳೆಯೊಂದಿಗೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸಲಿದೆ ಎಂದು ಇಲಾಖೆ ಎಚ್ಚರಿಸಿದೆ.

ಪಶ್ಚಿಮ ಬಂಗಾಳದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ತಿರುವಿನ ಪರಿಣಾಮ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ವಾತಾವರಣ ನಿರ್ಮಾಣವಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅದಾಗ್ಯೂ 'ಸುಪರ್ ಎಲ್ ನಿನೋ' ಪರಿಣಾಮದಿಂದ ಮುಂಗಾರು ಮಾರುತಗಳು ಸ್ವಲ್ಪ ದುರ್ಬಲಗೊಂಡಿರುವುದನ್ನೂ ಹವಾಮಾನ ಇಲಾಖೆ ಉಲ್ಲೇಖಿಸಿದೆ. ಬೆಳಗಾವಿ, ಧಾರವಾಡ, ಗದಗ್, ಬೀದರ್, ಕಲಬುರಗಿ ಮತ್ತು ಹಾವೇರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಈ ಭಾಗದಲ್ಲಿ ಗಾಳಿಯ ವೇಗ ಹೆಚ್ಚಿರಲಿದ್ದು, ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ.

ಕರಾವಳಿ ಸೇರಿ ಹಲವೆಡೆ ಸಾಧಾರಣ ಮಳೆ; ಹವಾಮಾನ ಇಲಾಖೆ ಎಚ್ಚರಿಕೆ

ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯಾಗಲಿದ್ದು, ಉಳಿದ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಅಥವಾ ತುಂತುರು ಮಳೆಯ ಸಾಧ್ಯತೆಯಿದೆ. ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಪ್ರಮುಖವಾಗಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದ ಬಲವಾದ ಗಾಳಿ ಬೀಸಲಿದ್ದು, ಒಟ್ಟಾರೆ ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಹಾಗೂ ತಂಪಾದ ಗಾಳಿ ಮುಂದುವರಿಯಲಿದೆ.