ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆಯಿಂದ ಎಚ್ಚರಿಕೆ

Karnataka Weather: ಹಲವು ಕಡಿಮೆಯಾಗಿದ್ದ ಮಳೆಯ ಅಬ್ಬರ ಮತ್ತೆ ಶುರುವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಮುಂದಿನ ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಸೆಪ್ಟೆಂಬರ್‌ 3ರ ವರೆಗೂ ರಾಜ್ಯದಲ್ಲಿ ಮಳೆ ಮುಂದುವರಿಯಲಿದೆ.

ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆಯಿಂದ ಎಚ್ಚರಿಕೆ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Sep 1, 2026 7:42 AM

ಬೆಂಗಳೂರು: ಹಲವು ಕಡಿಮೆಯಾಗಿದ್ದ ಮಳೆಯ ಅಬ್ಬರ ಮತ್ತೆ ಶುರುವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ (Karnataka Weather) ಭಾರೀ ಮಳೆಯಾಗುತ್ತಿದೆ. ಮುಂದಿನ ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಸೆಪ್ಟೆಂಬರ್‌ 3ರ ವರೆಗೂ ರಾಜ್ಯದಲ್ಲಿ ಮಳೆ ಮುಂದುವರಿಯಲಿದೆ. ಉತ್ತರ ಒಳನಾಡು, ಕರಾವಳಿಯ 12 ಜಿಲ್ಲೆಗಳಲ್ಲಿ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಸೆಪ್ಟೆಂಬರ್ 1 ರಿಂದ ಮುಂದಿನ ಒಂದು ವಾರದ ಕಾಲ ಕರ್ನಾಟಕ ರಾಜ್ಯದಾದ್ಯಂತ ಅಲ್ಲಲ್ಲಿ ಜೋರಾದ ಗಾಳಿ ಬೀಸುವ ವಾತಾವರಣ ಮುಂದುವರೆಯಲಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಒಳನಾಡು ಜಿಲ್ಲೆಗಳಲ್ಲಿ ಹಗಲಿನ ವೇಳೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 3ರವರೆಗೆ ಮಳೆ ಮತ್ತು ಮೋಡ ಕವಿದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗದಲ್ಲಿ ಸೆಪ್ಟೆಂಬರ್ 2 ಮತ್ತು 3ರಂದು ಮಳೆ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಾವೇರಿ, ಬಾಗಲಕೋಟೆ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗಬಹುದು. ಸೆಪ್ಟೆಂಬರ್ 3ರ ಬಳಿಕ ಉತ್ತರ ಕನ್ನಡ ಮತ್ತು ಶಿವಮೊಗ್ಗಕ್ಕೆ ಹೊಂದಿಕೊಂಡಿರುವ ಉತ್ತರ ಒಳನಾಡಿನ ಪ್ರದೇಶಗಳಲ್ಲಿ ಮಳೆ ಚುರುಕಾಗುವ ಸಾಧ್ಯತೆಯಿದೆ.

ರಾಜ್ಯದಲ್ಲಿ ಇಂದಿನ ಹವಾಮಾನ ಹೇಗಿದೆ? ಯಾವ ಜಿಲ್ಲೆಯಲ್ಲಿ ಮಳೆ?

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ನಗರದ ಕೆಲವು ಪ್ರದೇಶಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ತಂಪಾದ ಗಾಳಿ ಬೀಸಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆಲವೆಡೆ ಹಾಗೂ ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳ ಒಂದೆರಡು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ತಿಳಿಸಿದೆ.