ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರಾವಳಿಯಲ್ಲಿ ಭಾರೀ ಮಳೆ ಎಚ್ಚರಿಕೆ; ಹವಾಮಾನ ಇಲಾಖೆ ಕೊಟ್ಟ ಸೂಚನೆಯೇನು?

ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೊಡಗು, ಶಿವಮೊಗ್ಗ ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಇಂದು ಭಾರೀ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯಲ್ಲಿ ಭಾರೀ ಮಳೆ ಎಚ್ಚರಿಕೆ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar May 11, 2026 8:01 AM

ಬೆಂಗಳೂರು: ರಾಜ್ಯದ ಹಲವೆಡೆ ಮಳೆಯಾಗುವ (Karnataka Weather) ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೊಡಗು, ಶಿವಮೊಗ್ಗ ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಇಂದು ಭಾರೀ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಶುಷ್ಕ ವಾತಾವರಣ ಇರಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ಗರಿಷ್ಠ ತಾಪಮಾನ ಕೊಪ್ಪಳದಲ್ಲಿ 41 ಡಿಗ್ರಿ ಸೆಲ್ಸಿಯಸ್ ಕಲಬುರಗಿ, ಬೀದರ್, ವಿಜಯಪುರದಲ್ಲಿ ತಲಾ 39 ಡಿಗ್ರಿ ಸೆಲ್ಸಿಯಸ್, ರಾಯಚೂರು ಮತ್ತು ಹಾವೇರಿಯಲ್ಲಿ ತಲಾ 38 ಡಿಗ್ರಿ ಸೆಲ್ಸಿಯಸ್, ಗದಗ, ಧಾರವಾಡ, ಕಾರವಾಡದಲ್ಲಿ 36 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಮೇ 11ರಿಂದ ಗುಡುಗು-ಮಿಂಚಿನೊಂದಿಗೆ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ.

ಮೇ 13ರಿಂದ ಮತ್ತೆ ಕೆಲವು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದ್ದರೂ, ಗದಗ ಮತ್ತು ಹಾವೇರಿ ಭಾಗಗಳಲ್ಲಿ ಚದುರಿದ ಮಳೆಯ ವಾತಾವರಣ ಮುಂದುವರಿಯಬಹುದು ಎಂದು ವರದಿ ತಿಳಿಸಿದೆ. ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ ಮುಂದಿನ ಐದು ದಿನಗಳವರೆಗೆ ಹೆಚ್ಚಿನ ಬದಲಾವಣೆ ಇರುವುದಿಲ್ಲ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ.

ದಕ್ಷಿಣ ಒಳನಾಡಿನಲ್ಲಿ ಒಂದು ವಾರ ಮಳೆ

ದಕ್ಷಿಣ ಒಳನಾಡು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಏಳು ದಿನಗಳ ಕಾಲ ಚದುರಿದ ಮಳೆಯ ವಾತಾವರಣ ಮುಂದುವರಿಯಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ಮೈಸೂರು, ರಾಮನಗರ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕೆಲವೆಡೆ ಗುಡುಗು-ಮಿಂಚಿನೊಂದಿಗೆ ಸಾಧಾರಣ ಮಳೆಯ ಸಾಧ್ಯತೆ ಇದೆ.