ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ರಾಜ್ಯದಲ್ಲಿ ಇಂದಿನ ಹವಾಮಾನ ಹೇಗಿದೆ? ಯಾವ ಜಿಲ್ಲೆಯಲ್ಲಿ ಮಳೆ?

Karnataka Weather: ರಾಜ್ಯದಲ್ಲಿ ಮುಂಗಾರು ಕೊಂಚ ಇಳಿಕೆಯಾಗಿದೆ. ಕರಾವಳಿ ಸೇರಿದಂತೆ ಹಲವು ಭಾಗದಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಬೆಂಗಳೂರಿನಲ್ಲಿ ಒಣ ಹವೆ ಮುಂದುವರಿದಿದೆ. ಆಗಸ್ಟ್‌ 16ರವರೆಗೂ ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದಿನ ಹವಾಮಾನ ಹೇಗಿದೆ? ಯಾವ ಜಿಲ್ಲೆಯಲ್ಲಿ ಮಳೆ?

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Aug 12, 2026 7:10 AM

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಕೊಂಚ ಇಳಿಕೆಯಾಗಿದೆ. ಕರಾವಳಿ ಸೇರಿದಂತೆ ಹಲವು ಭಾಗದಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಬೆಂಗಳೂರಿನಲ್ಲಿ ಒಣ ಹವೆ ಮುಂದುವರಿದಿದೆ. ಆಗಸ್ಟ್‌ 16ರವರೆಗೂ (Karnataka weather) ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ ಒಂದು ವಾರ ರಾಜ್ಯದಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಉತ್ತರ ಒಳನಾಡಿನ ಜಿಲ್ಲೆಗಳಾದ ಗದಗ, ಹಾವೇರಿ, ಧಾರವಾಡ, ಕೊಪ್ಪಳ, ಬೆಳಗಾವಿ, ಬಾಗಲಕೋಟೆ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಂದೆರಡು ಸ್ಥಳಗಳಲ್ಲಿ ಆಗಸ್ಟ್‌ 16ರವರೆಗೂ ಹಗುರದಿಂದ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಅನೇಕ ಭಾಗಗಳಲ್ಲಿ ನಿರಂತರ ಗಾಳಿ ಬೀಸಲಿದ್ದು, ಮಳೆಯ ಪ್ರಮಾಣ ಕಡಿಮೆಯೇ ಇರಲಿದೆ ಎಂದು IMD ಮುನ್ಸೂಚನೆ ನೀಡಿದೆ.

ಇಂದಿನ ಮುನ್ಸೂಚನೆಯಂತೆ ಬೆಂಗಳೂರಿನಲ್ಲಿ ಇಂದು ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಮಧ್ಯಾಹ್ನ ಅಥವಾ ಸಂಜೆ ವೇಳೆ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಪಶ್ಚಿಮ ದಿಕ್ಕಿನಿಂದ ಗಂಟೆಗೆ ಸುಮಾರು 11 ರಿಂದ 13 ಮೈಲಿ (18-20 ಕಿ.ಮೀ) ವೇಗದಲ್ಲಿ ತಂಪಾದ ಗಾಳಿ ಬೀಸಲಿದೆ.

ಹಿಮಾಚಲ ಪ್ರದೇಶದಲ್ಲಿ ಅಬ್ಬರಿಸಿದ ಮಳೆ-ಗಾಳಿ: ಒಂದೇ ತಿಂಗಳಲ್ಲಿ 157 ಮಂದಿ ಸಾವು, 260 ರಸ್ತೆ ಸಂಪರ್ಕ ಕಡಿತ

ಕರಾವಳಿಯಲ್ಲಿ ಈ 2 ದಿನಗಳಲ್ಲಿ ಗಾಳಿಯ ವೇಗ ಹೆಚ್ಚಿರಲಿದ್ದು, ಸಾರ್ವಜನಿಕರು ಹಾಗೂ ರೈತರು ಮರಗಳ ಕೆಳಗೆ ನಿಲ್ಲದಂತೆ ಹಾಗೂ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಹವಾಮಾನ ಇಲಾಖೆಯ ಈ ಮುನ್ನೆಚ್ಚರಿಕೆಯ ಹಿನ್ನೆಲೆಯಲ್ಲಿ ಕರಾವಳಿ ಮತ್ತು ಉತ್ತರ ಒಳನಾಡಿನ ಜನರು ತುರ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಅತ್ಯಾವಶ್ಯಕವಾಗಿದೆ.