ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ; ಇನ್ನುಳಿದ ಭಾಗಗಳಲ್ಲಿ ಜೂ.28ರವರೆಗೂ ಸಾಧಾರಣ ಮಳೆ
ರಾಜ್ಯದ ಹಲವೆಡೆ ಸಾಧಾರಣ ಮಳೆಯ ಮುನ್ಸೂಚನೆಯಿದ್ದು, ಕರಾವಳಿಯ ಜಿಲ್ಲೆಗಳಲ್ಲಿ ಇಂದು (Karnataka Weather) ಭಾರೀ ಮಳೆಯ ನಿರೀಕ್ಷೆಯಿದೆ. ನಾಳೆಯಿಂದ ಕರಾವಳಿಗೆ 1 ವಾರ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಶಿವಮೊಗ್ಗ, ತುಮಕೂರು , ಮಂಡ್ಯ , ಚಾಮರಾಜನಗರ, ಚಿತ್ರದುರ್ಗ, ಮೈಸೂರಲ್ಲಿ ಸಂಜೆ ಭಾರಿ ಮಳೆಯಾಗಲಿದೆ.
ಸಂಗ್ರಹ ಚಿತ್ರ -
ಬೆಂಗಳೂರು: ರಾಜ್ಯದ ಹಲವೆಡೆ ಸಾಧಾರಣ ಮಳೆಯ ಮುನ್ಸೂಚನೆಯಿದ್ದು, ಕರಾವಳಿಯ ಜಿಲ್ಲೆಗಳಲ್ಲಿ ಇಂದು (Karnataka Weather) ಭಾರೀ ಮಳೆಯ ನಿರೀಕ್ಷೆಯಿದೆ. ನಾಳೆಯಿಂದ ಕರಾವಳಿಗೆ 1 ವಾರ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಾಳೆಯಿಂದ ಮಳೆ ಇನ್ನಷ್ಟು ಚುರುಕಾಗಲಿದೆ. ಅದರಲ್ಲೂ ಜೂ.26 ಮತ್ತು ಜೂ.27ರಂದು ಭಯಂಕರ ಮಳೆಯಾಗುವ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ.
ದಕ್ಷಿಣ ಕನ್ನಡ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಶಿವಮೊಗ್ಗ, ತುಮಕೂರು , ಮಂಡ್ಯ , ಚಾಮರಾಜನಗರ, ಚಿತ್ರದುರ್ಗ, ಮೈಸೂರಲ್ಲಿ ಸಂಜೆ ಭಾರಿ ಮಳೆಯಾಗಲಿದ್ದು, ಗುಡುಗು-ಬಿರುಗಾಳಿ ಸಹಿತ ಅಲರ್ಟ್ ಕೊಡಲಾಗಿದೆ. ಇನ್ನು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ರಾಯಚೂರು, ಬಾಗಲಕೋಟೆ, ಬೀದರ್, ಕಲಬುರ್ಗಿ, ಕೊಪ್ಪಳ, ವಿಜಯಪುರ, ಯಾದಗಿ ಜಿಲ್ಲೆಗಳಲ್ಲಿ ಜೂ.28ರವರೆಗೂ ಗುಡುಗು ಸಹಿತ ಸಾಧಾರಣದಿಂದ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಜೂ.28ರವರೆಗೂ ಸಾಧಾರಣ ಮಳೆಯಾಗಲಿದೆ.
ಜೂನ್ 26 ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರೀ ಮಳೆಯ ಮುನ್ಸೂಚನೆಯಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ , ಧಾರವಾಡ, ಬೆಳಗಾವಿ, ಹಾಗೂ ಗದಗ, ಕಲ್ಯಾಣ ಕರ್ನಾಟಕದ ಭಾಗವಾದ ರಾಯಚೂರು, ಬೀದರ್, ಕಲಬುರ್ಗಿ, ಯಾದಗಿರಿಯಲ್ಲಿ ಮುಂದಿನ ಮೂರು ದಿನ ಯೆಲ್ಲೋ ಅಲರ್ಟ್ ಇರಲಿದೆ.
ಬೆಂಗಳೂರಿಗೆ ಮುಂಗಾರು ಮಳೆ ಎಂಟ್ರಿ ಯಾವಾಗ? ಹವಾಮಾನ ಇಲಾಖೆ ನೀಡಿದ ಮುನ್ಸೂಚನೆ ಏನು?
ಇಳಿಯುತ್ತಿಲ್ಲ ತಾಪಮಾನ
ಜೂನ್ ತಿಂಗಳು ಕಳೆಯುತ್ತ ಬಂದರೂ ತಾಪಮಾನದಲ್ಲಿಯೂ ಇಳಿಕೆಯಾಗುತ್ತಿಲ್ಲ. ರಾಜ್ಯಾದ್ಯಂತ ಅನೇಕ ಭಾಗಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಹೆಚ್ಚಳವಾಗುತ್ತಿದೆ. ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತಲೂ 5 ಡಿಗ್ರಿ ಸೆಲ್ಸಿಯಸ್‌ಗಳಷ್ಟು ಹೆಚ್ಚಾಗಿದೆ. ಇನ್ನು ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ 3-5 ಡಿಗ್ರಿ ಸೆಲ್ಸಿಯಸ್‌ವರೆಗೆ ಹೆಚ್ಚಳವಾಗಿದೆ. ಕಲಬುರ್ಗಿಯಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್‌ಗಳಷ್ಟು ದಾಖಲಾಗುತ್ತಿದೆ. ರಾಜ್ಯಾದ್ಯಂತ ಒಟ್ಟಾರೆ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್‌ನಿಂದ 39 ಡಿಗ್ರಿ ಸೆಲ್ಸಿಯಸ್‌ವರೆಗೆ ಇದೆ.