ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ರಾಜ್ಯದಲ್ಲಿ ಮುಂಗಾರು ದುರ್ಬಲ; ಹಲವು ಜಿಲ್ಲೆಗಳಲ್ಲಿ ಮಳೆ ಕುಂಠಿತ

ಜೂನ್‌ ಎರಡನೇ ವಾರದಲ್ಲಿಯೂ ರಾಜ್ಯದಲ್ಲಿ ಮಳೆ ಕೊರತೆ ಎದುರಾಗಿದೆ. ಹಲವೆಡೆ ನಿರೀಕ್ಷೆಯಂತೆ ಮುಂಗಾರು ಮಳೆ ಆಗದ ಕಾರಣ ರೈತರು ಕಂಗಾಲಾಗಿದ್ದಾರೆ. ಇದರ ಮಧ್ಯೆ ಹವಾಮಾನ ಇಲಾಖೆ 17-06-2026 ರಿಂದ 22-06-2026 ರವರೆಗೆ ಕರ್ನಾಟಕದಲ್ಲಿ ಮಳೆಯ ಪ್ರಮಾಣ ನಿಧಾನವಾಗಿ ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ರಾಜ್ಯದಲ್ಲಿ ಮುಂಗಾರು ದುರ್ಬಲ; ಹಲವು ಜಿಲ್ಲೆಗಳಲ್ಲಿ ಮಳೆ ಕುಂಠಿತ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Jun 17, 2026 6:56 AM

ಬೆಂಗಳೂರು: ಜೂನ್‌ ಎರಡನೇ ವಾರದಲ್ಲಿಯೂ ರಾಜ್ಯದಲ್ಲಿ ಮಳೆ ಕೊರತೆ ಎದುರಾಗಿದೆ. ಹಲವೆಡೆ ನಿರೀಕ್ಷೆಯಂತೆ ಮುಂಗಾರು ಮಳೆ ಆಗದ ಕಾರಣ ರೈತರು ಕಂಗಾಲಾಗಿದ್ದಾರೆ. ಇದರ ಮಧ್ಯೆ (Karnataka Weather) ಹವಾಮಾನ ಇಲಾಖೆ 17-06-2026 ರಿಂದ 22-06-2026 ರವರೆಗೆ ಕರ್ನಾಟಕದಲ್ಲಿ ಮಳೆಯ ಪ್ರಮಾಣ ನಿಧಾನವಾಗಿ ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಮುಂದಿನ ಹತ್ತು ದಿನಗಳವರೆಗೆ ರಾಜ್ಯಾದ್ಯಂತ ಭಾರೀ ಜೋರು ಮಳೆಯಾಗುವ ಸಾಧ್ಯತೆಗಳು ತೀರಾ ಕ್ಷೀಣಿಸಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ತಿಳಿಸಲಾಗಿದೆ.

ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಚದುರಿದ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ. ಆದರೆ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿಲ್ಲ. ಇನ್ನೊಂದೆಡೆ ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲೂ ದುರ್ಬಲ ಮುಂಗಾರು ಮುಂದುವರಿಯಲಿದ್ದು, ಸಂಜೆ ವೇಳೆಗೆ ಕರಾವಳಿ ಗಡಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಾತ್ರ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯಾಗಬಹುದು.

ಉತ್ತರ ಒಳನಾಡು ಕರ್ನಾಟಕದ ವಿಜಯಪುರ, ಕಲಬುರಗಿ, ರಾಯಚೂರು, ಕೊಪ್ಪಳ, ಯಾದಗಿರಿ, ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಜೂನ್ 22ರಂದು ಈ ಭಾಗದ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆ ಚಟುವಟಿಕೆ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಏಳು ದಿನಗಳ ಕಾಲ ಅಲ್ಲಲ್ಲಿ ಸಾಧಾರಣದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ.

ದಕ್ಷಿಣ ಒಳನಾಡಲ್ಲಿ 2 ದಿನ ಭಾರಿ ಮಳೆ ನಿರೀಕ್ಷೆ; ಹವಾಮಾನ ಇಲಾಖೆ ಎಚ್ಚರಿಕೆ

ಜೂನ್‌ 22 ರಂದು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮಳೆ ಚಟುವಟಿಕೆ ಹೆಚ್ಚಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಬೆಂಗಳೂರು, ಮೈಸೂರು, ಮಂಡ್ಯ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ.