ಕರಾವಳಿ- ಉತ್ತರ ಕರ್ನಾಟಕದಲ್ಲಿ ಮಳೆ ಮುನ್ಸೂಚನೆ; ಹಲವೆಡೆ ಆರೆಂಜ್ ಅಲರ್ಟ್
ಇಂದು ರಾಜ್ಯದಲ್ಲಿ ಹಲವೆಡೆ ಮಳೆಯಲಾಗಲಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಇನ್ನು ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವುದು.
ಸಂಗ್ರಹ ಚಿತ್ರ -
ಬೆಂಗಳೂರು: ಇಂದು ರಾಜ್ಯದಲ್ಲಿ ಹಲವೆಡೆ ಮಳೆಯಲಾಗಲಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಭಾರಿ ಮಳೆಯಾಗುವ (Karnataka Weather) ಮುನ್ಸೂಚನೆ ಇದೆ. ಇನ್ನು ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವುದು. ಇನ್ನು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕರ್ನಾಟಕದ ಭಾಗಗಳಾದ ಬೆಳಗಾವಿ, ಹಾವೇರಿ, ಧಾರವಾಡ, ಗದಗ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಮಂಡ್ಯ, ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಹಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಅನೇಕ ಭಾಗಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.
ಜೂನ್‌ನಲ್ಲಿ ಮಂಕಾಗಿದ್ದ ಮುಂಗಾರು ಮಳೆ ಜುಲೈ ತಿಂಗಳಲ್ಲಿ ಮತ್ತೆ ಚುರುಕಾಗುವ ಲಕ್ಷಣಗಳಿವೆ. ಕರಾವಳಿ ಜಿಲ್ಲೆಗಳು, ಕೊಡಗು ಹಾಗೂ ಚಿಕ್ಕಮಂಗಳೂರಲ್ಲಿ ಜುಲೈ 2 ಹಾಗೂ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ರಾಯಚೂರು, ಯಾದಗಿರಿ, ಹಾಸನ, ಶಿವಮೊಗ್ಗ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜುಲೈ 2 ರಂದು ಕರಾವಳಿ, ಮಲೆನಾಡು, ಕಲ್ಯಾಣ ಕರ್ನಾಟಕದಲ್ಲಿ ಮಳೆ ಚುರುಕಾಗಲಿದೆ.
ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ; ಇನ್ನುಳಿದ ಭಾಗಗಳಲ್ಲಿ ಜೂ.28ರವರೆಗೂ ಸಾಧಾರಣ ಮಳೆ
ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ ಇದ್ದು, ಹಗುರ ಮಳೆಯ ಮುನ್ಸೂಚನೆ ಇದೆ. 21 ಡಿಗ್ರಿ ಸೆ, ಹಾಗೂ 30 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಹಾಗೂ ಗರಿಷ್ಠ ತಾಪಮಾನವಿದೆ.