ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಚಿಕ್ಕಮಗಳೂರು, ಬೆಳಗಾವಿ ಸೇರಿ ಹಲವು ಕಡೆ ತಂಪೆರೆದ ವರುಣ; ರಾಜ್ಯದಲ್ಲಿ ಇನ್ನೂ ಐದು ದಿನ ಮಳೆ ಸೂಚನೆ

ಕೆಲ ದಿನಗಳಿಂದ ಬಿಸಿಲಿನ ಹೊಡೆತಕ್ಕೆ ತತ್ತರಿಸಿದ್ದ ಜನತೆಗೆ ನಿನ್ನೆ ವರ್ಷಧಾರೆ ತಂಪೆರೆದಿದೆ. ಚಿಕ್ಕಮಗಳೂರು, ಬೀದರ್, ಬೆಳಗಾವಿ, ಮಡಿಕೇರಿ ಸೇರಿದಂತೆ ರಾಜ್ಯದ ಅನೇಕ ಭಾಗಗಳಲ್ಲಿ ಮಳೆಯಾಗಿದೆ. ಮೂಡಿಗೆರೆ ಮತ್ತು ಎನ್.ಆರ್.ಪುರ ತಾಲೂಕುಗಳ ಹಲವೆಡೆ ಆಲಿಕಲ್ಲು ಮಳೆಯಾಗಿದೆ. ಬೆಳಗಾವಿ ನಗರದ ಸದಾಶಿವನಗರ ಮತ್ತು ಶಾಹುನಗರದಲ್ಲಿ ಭಾರೀ ಮಳೆಯಾಗಿದೆ.

ಚಿಕ್ಕಮಗಳೂರು, ಬೆಳಗಾವಿ ಸೇರಿ ಹಲವು ಕಡೆ ತಂಪೆರೆದ ವರುಣ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Mar 16, 2026 8:18 AM

ಬೆಂಗಳೂರು: ಕೆಲ ದಿನಗಳಿಂದ ಬಿಸಿಲಿನ ಹೊಡೆತಕ್ಕೆ ತತ್ತರಿಸಿದ್ದ ಜನತೆಗೆ ನಿನ್ನೆ ವರ್ಷಧಾರೆ ತಂಪೆರೆದಿದೆ. ಚಿಕ್ಕಮಗಳೂರು, ಬೀದರ್, (Karnataka Weather) ಬೆಳಗಾವಿ, ಮಡಿಕೇರಿ ಸೇರಿದಂತೆ ರಾಜ್ಯದ ಅನೇಕ ಭಾಗಗಳಲ್ಲಿ ಮಳೆಯಾಗಿದೆ. ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೂಡಿಗೆರೆ ಮತ್ತು ಎನ್.ಆರ್.ಪುರ ತಾಲೂಕುಗಳ ಹಲವೆಡೆ ಆಲಿಕಲ್ಲು ಮಳೆಯಾಗಿದೆ. ಬೆಳಗಾವಿ ನಗರದ ಸದಾಶಿವನಗರ ಮತ್ತು ಶಾಹುನಗರದಲ್ಲಿ ಭಾರೀ ಮಳೆಯಾಗಿದೆ. ಬೀದರ್‌ನ ಔರಾದ್, ಕಮಲನಗರ, ಭಾಲ್ಕಿ, ಚಿಟಗುಪ್ಪ, ಬಸವಕಲ್ಯಾಣ, ಹುಲಸೂರು ಸೇರಿ ಇನ್ನೂ ಹಲವು ಕಡೆ ಉತ್ತಮ ಮಳೆಯಾಗಿದೆ. ಮಾರ್ಚ್ 21ರವರೆಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಸಕಲೇಶಪುರ ಸೇರಿದಂತೆ ಇನ್ನೂ ಹಲವು ಕಡೆ ಮಳೆಯಾಗುವ ಸಾಧ್ಯತೆ ಹೆಚ್ಚಿದೆ.

ಉತ್ತರ ಒಳನಾಡು ಜಿಲ್ಲೆಗಳಾದ ಬಳ್ಳಾರಿ, ಕೊಪ್ಪಳ, ರಾಯಚೂರು, ವಿಜಯಪುರ, ಕಲಬುರಗಿ, ಬೀದರ್, ಯಾದಗಿರಿಯಲ್ಲಿ ಮೋಡದ ವಾತಾವರಣ, ಗಾಳಿ ಒತ್ತಡ ಹೆಚ್ಚಿದರೆ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಇನ್ನು ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ-ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗದಲ್ಲಿ ಅಲ್ಲಲ್ಲಿ ಮೋಡ, ಸಂಜೆ-ರಾತ್ರಿ ಮಳೆಯ ಸಾಧ್ಯತೆ. ಬೆಂಗಳೂರಿನಲ್ಲಿ ಮಾರ್ಚ್ 16ರ ನಂತರ ಮಳೆಯ ಸೂಚನೆ ಇದೆ. ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯ ಸಕಲೇಶಪುರ ಸುತ್ತಮುತ್ತ ಭಾಗಗಳಲ್ಲಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

GBA Election: ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆ; ಮತದಾರರ ಪಟ್ಟಿ ಪ್ರಕಟ

ಬೆಂಗಳೂರಿನಲ್ಲಿ ಇಂದು ಶುಷ್ಕ ವಾತಾವರಣ ಇರಲಿದೆ. ಮಾರ್ಚ್ ಎರಡನೇ ವಾರದ ಬಳಿಕ ಬಿಸಿಲಿನ ತೀವ್ರತೆ ಇನ್ನಷ್ಟು ಹೆಚ್ಚಲಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕೆಲ ಸೂಚನೆಗಳನ್ನು ಹೊರಡಿಸಿದ್ದು, ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಅನಗತ್ಯವಾಗಿ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ. ಹೀಟ್ ಸ್ಟ್ರೋಕ್ ಹಾಗೂ ಡಿಹೈಡ್ರೇಶನ್ ಅಪಾಯ ಇರುವುದರಿಂದ ವೃದ್ಧರು, ಗರ್ಭಿಣಿಯರು, ಮಕ್ಕಳು ಮತ್ತು ಹೃದಯ ಸಂಬಂಧಿ ಕಾಯಿಲೆ ಇರುವವರು ವಿಶೇಷ ಎಚ್ಚರಿಕೆ ವಹಿಸಬೇಕು ತಿಳಿಸಲಾಗಿದೆ.