ರಾಜ್ಯದಲ್ಲಿ ಮುಂಗಾರು ಕ್ಷೀಣ: ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ, ಉತ್ತರ ಕರ್ನಾಟಕದಲ್ಲಿ ಒಣ ಹವೆ
ರಾಜ್ಯದಲ್ಲಿ ಮುಂಗಾರು ಮಾರುತಗಳ ಪ್ರಭಾವ ಕ್ಷೀಣಿಸುತ್ತಿದ್ದರೂ, ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಸಂಗ್ರಹ ಚಿತ್ರ -
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಾರುತಗಳ ಪ್ರಭಾವ ಕ್ಷೀಣಿಸುತ್ತಿದ್ದರೂ, ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿ (Karnataka Weather) ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದ್ದು, ಬಿಸಿಲಿನ ತಾಪಮಾನದಲ್ಲಿ ಅಲ್ಪ ಏರಿಕೆಯಾಗಲಿದೆ. ಆದರೆ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿಯ ವೇಳೆಗೆ ದಿಢೀರ್ ಹವಾಮಾನ ಬದಲಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿ ತಿಳಿಸಿದೆ.
ದಕ್ಷಿಣ ಒಳನಾಡಿಗೆ ಮಳೆ ಮುನ್ಸೂಚನೆ
ಹವಾಮಾನ ಇಲಾಖೆಯ ವರದಿಯ ಪ್ರಕಾರ, ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ ಮತ್ತು ಮಡಿಕೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ತಮಿಳುನಾಡು ಕರಾವಳಿ ತೀರದಲ್ಲಿ ಉಂಟಾಗಿರುವ ಹವಾಮಾನ ಬದಲಾವಣೆಯು ದಕ್ಷಿಣ ಒಳನಾಡಿನ ಮೇಲೆಯೂ ಪ್ರಭಾವ ಬೀರಲಿದ್ದು, ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣ ನಿರ್ಮಾಣವಾಗಲಿದೆ.
ಮುಂಗಾರು ಮಳೆ ಬಹುತೇಕ ಕ್ಷೀಣಿಸಿರುವುದರಿಂದ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಸದ್ಯಕ್ಕೆ ಯಾವುದೇ ಮಳೆಯ ಮುನ್ಸೂಚನೆ ಇಲ್ಲ. ಆದರೆ, ಅಕ್ಟೋಬರ್ 16 ರ ಸುಮಾರಿಗೆ ರಾಜ್ಯಕ್ಕೆ ಹಿಂಗಾರು ಮಳೆ ಪ್ರವೇಶಿಸುವ ದಿನದಂದು ಮಾತ್ರ ಈ ಭಾಗದ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಮುಂಗಾರು ಮಳೆಯ ತೀವ್ರತೆ ಗಮನಾರ್ಹವಾಗಿ ಇಳಿಮುಖವಾಗಿದ್ದು, ಒಟ್ಟಾರೆಯಾಗಿ ಸಾಧಾರಣ ವಾತಾವರಣ ಇರಲಿದೆ. ತಮಿಳುನಾಡು ಕರಾವಳಿ ತೀರದ ಹವಾಮಾನ ಬದಲಾವಣೆಯ ಪ್ರಭಾವದಿಂದಾಗಿ ಕರಾವಳಿಯ ಕೆಲವು ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಸಂಜೆ ಅಥವಾ ರಾತ್ರಿಯ ಅವಧಿಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಭಾರತ vs ವೆಸ್ಟ್ ಇಂಡೀಸ್ ಮೊದಲ ಟಿ20 ಪಂದ್ಯದ ಪಿಚ್, ಹವಾಮಾನ ವರದಿ ಸ್ಥಿತಿಗತಿ
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 30-31 ಡಿಗ್ರಿ ಸೆಲ್ಸಿಯಸ್ ವರೆಗೆ ದಾಖಲಾಗಲಿದ್ದು, ದಿನವಿಡೀ ಒಣ ಹವೆ ಮತ್ತು ಬಿಸಿಲಿನ ವಾತಾವರಣ ಹೆಚ್ಚಾಗಿ ಕಂಡುಬರಲಿದೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯ ಪ್ರಕಾರ, ನಗರ ಮತ್ತು ಗ್ರಾಮಾಂತರ ಭಾಗಗಳಲ್ಲಿ ಸದ್ಯಕ್ಕೆ ಭಾರಿ ಮಳೆಯ ಮುನ್ಸೂಚನೆ ಇಲ್ಲದಿದ್ದರೂ, ಮಧ್ಯಾಹ್ನದ ನಂತರ ಭಾಗಶಃ ಮೋಡ ಕವಿದ ವಾತಾವರಣ ಉಂಟಾಗಬಹುದು.