ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಅಕ್ಟೋಬರ್ 7 ಮತ್ತು 8ರಂದು ಕರಾವಳಿ ಕರ್ನಾಟಕದ ಕೆಲವು ಕಡೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಮಳೆ ಹಾಗೂ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ  ಕರಾವಳಿ, ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Oct 7, 2026 8:12 AM

ಬೆಂಗಳೂರು: ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಅಕ್ಟೋಬರ್ 7 ಮತ್ತು 8ರಂದು ಕರಾವಳಿ ಕರ್ನಾಟಕದ ಕೆಲವು ಕಡೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಹಲವು (Karnataka Weather) ಜಿಲ್ಲೆಗಳಲ್ಲೂ ಮಳೆ ಹಾಗೂ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಖ್ಯವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು ಮತ್ತು ಮಿಂಚಿನೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ತೀರದಲ್ಲಿ ಅಕ್ಟೋಬರ್ 10 ರವರೆಗೆ ಮಳೆಯ ವಾತಾವರಣ ಮುಂದುವರಿಯಲಿದ್ದು, ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಉತ್ತರ ಒಳನಾಡಿನಲ್ಲಿ ಬಹುತೇಕ ಒಣಹವೆ ಮುಂದುವರಿಯಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಹಾಗೂ ಶಿವಮೊಗ್ಗ ಜಿಲ್ಲೆಗಳ ಕೆಲವು ಕಡೆ ಸಾಧಾರಣ ಮಳೆಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ನಾಳೆ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿಂದು ಗುಡುಗು ಸಹಿತ ಮಳೆ; ಬೆಂಗಳೂರಿನ ಹವಾಮಾನ ಹೇಗಿದೆ?

ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಹಗಲಿನ ಅವಧಿಯಲ್ಲಿ ಗರಿಷ್ಠ ತಾಪಮಾನವು 28°C ರಿಂದ 33°C ವರೆಗೆ ದಾಖಲಾಗಲಿದ್ದು, ಸೆಕೆಯಿಂದ ಕೂಡಿದ ವಾತಾವರಣವಿರಲಿದೆ. ಆದರೆ, ಸಂಜೆಯಾಗುತ್ತಿದ್ದಂತೆ ವಾತಾವರಣ ಸಂಪೂರ್ಣ ಬದಲಾಗಲಿದ್ದು, ಗುಡುಗು-ಮಿಂಚು ಸಹಿತ ಭಾರಿ ಮಳೆಯಾಗಲಿದೆ.