ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕದ ಹಲವು ಮಳೆ ಸಾಧ್ಯತೆ; ಬೆಂಗಳೂರಿನ ಹವಾಮಾನ ಹೇಗಿರಲಿದೆ?

Karnataka Weather: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬರುವ ನಿರೀಕ್ಷೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಇಂದು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಹಲವು ಮಳೆ ಸಾಧ್ಯತೆ; ಬೆಂಗಳೂರಿನ ಹವಾಮಾನ ಹೇಗಿರಲಿದೆ?

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Sep 9, 2026 8:02 AM

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ರಾಜ್ಯದ ಬಹುತೇಕ ಭಾಗಗಳಲ್ಲಿ (Karnataka Weather) ಮೋಡ ಕವಿದ ವಾತಾವರಣ ಕಂಡುಬರುವ ನಿರೀಕ್ಷೆಯಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಇಂದು ಸೆಪ್ಟೆಂಬರ್ 9ರಂದು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಇಂದು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಕರ್ನಾಟಕದಲ್ಲಿ ಮುಂದಿನ ಕೆಲವು ದಿನ ಮಳೆಯ ಸಾಧ್ಯತೆ ಇದ್ದರೂ, ಸೆಪ್ಟೆಂಬರ್ 9ರಂದು ಯಾವುದೇ ನಿರ್ದಿಷ್ಟ ಮಳೆ ಎಚ್ಚರಿಕೆಯನ್ನು IMD ನೀಡಿಲ್ಲ.

ಉತ್ತರ ಒಳನಾಡು ಕರ್ನಾಟಕದಲ್ಲಿಯೂ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸೆಪ್ಟೆಂಬರ್ 9 ಮತ್ತು 10ರಂದು ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.

ಸೆಪ್ಟೆಂಬರ್‌ ತಿಂಗಳಿನಲ್ಲಿಯೇ ರಾಜ್ಯದ ಹಲವೆಡೆ ಬರಗಾಲ; ಇಂದಿನ ಹವಾಮಾನ ಹೇಗಿದೆ

ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣ ಮುಂದುವರಿಯುವ ಸಾಧ್ಯತೆ ಇದ್ದು, ಗರಿಷ್ಠ ತಾಪಮಾನ ಸುಮಾರು 31–32 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ ಸುಮಾರು 21 ಡಿಗ್ರಿ ಸೆಲ್ಸಿಯಸ್ ಇರುವ ನಿರೀಕ್ಷೆಯಿದೆ. ಅಲ್ಲಲ್ಲಿ ತುಂತುರು ಮಳೆ ಅಥವಾ ಗುಡುಗು ಸಹಿತ ಮಳೆಯ ಸಾಧ್ಯತೆಯಿದೆ.