Karnataka Weather: ವಿಜಯಪುರದಲ್ಲಿ ರಾಜ್ಯದಲ್ಲೇ ಕನಿಷ್ಠ ಉಷ್ಣಾಂಶ ದಾಖಲು; ಕರ್ನಾಟಕದಲ್ಲಿ ನಾಳೆ ಹೇಗಿರಲಿದೆ ಹವಾಮಾನ?
ಮುಂದಿನ 2 ದಿನಗಳವರೆಗೆ ಕರ್ನಾಟಕದ ಉತ್ತರ ಒಳನಾಡಿನಲ್ಲಿ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ, ನಂತರ 2-3°C ರಷ್ಟು ಕ್ರಮೇಣ ಹೆಚ್ಚಳವಾಗುವ ಸಾಧ್ಯತೆ ಇದೆ. ಹಾಗೆಯೇ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಉಷ್ಣಾಂಶದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ, ನಂತರ 2-3°C ರಷ್ಟು ಕ್ರಮೇಣ ಹೆಚ್ಚಳವಾಗಲಿದೆ.
ಸಾಂದರ್ಭಿಕ ಚಿತ್ರ -
ಬೆಂಗಳೂರು, ಡಿ.13: ರಾಜ್ಯದಲ್ಲಿ ಇತ್ತೀಚೆಗೆ ವಿಪರೀತ ಚಳಿ ಕಂಡುಬರುತ್ತಿದೆ. ಕರ್ನಾಟಕದ ಸಮತಟ್ಟಾದ ಪ್ರದೇಶಗಳಲ್ಲಿ ವಿಜಯಪುರದಲ್ಲಿ ಶುಕ್ರವಾರ ರಾಜ್ಯದಲ್ಲೇ ಅತಿ ಕನಿಷ್ಠ ತಾಪಮಾನ 7 ಡಿಗ್ರಿ ಸೆ. ದಾಖಲಾಗಿದೆ. ಇನ್ನು ನಾಳೆ (ಡಿ.14) ಕೂಡ ಶೀತ ಗಾಳಿ ಬೀಸುವ ಹಿನ್ನೆಲೆಯಲ್ಲಿ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ವಿಜಯನಗರ, ದಾವಣಗೆರೆ, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಹಾಸನ, ಚಿಕ್ಕಬಳ್ಳಾಪುರ ಸೇರಿ 17 ಜಿಲ್ಲೆಗಳಿಗೆ ಹವಾಮಾನ ಇಲಾಖೆ (Karnataka Weather) ಯೆಲ್ಲೋ ಅಲರ್ಟ್ ನೀಡಿದೆ.
ಡಿ.14ರಿಂದ 19ರವರೆಗೆ ಕರಾವಳಿ, ಉತ್ತರ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆ ಇದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಮುಖ್ಯವಾಗಿ ಸ್ಪಷ್ಟ ಆಕಾಶ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು /ಮಂಜು ಕವಿದಿರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 14°C ಇರುವ ಸಾಧ್ಯತೆ ಹೆಚ್ಚಿದೆ.
ತಾಪಮಾನದ ಪರಿಸ್ಥಿತಿ
ಕರ್ನಾಟಕದ ಉತ್ತರ ಒಳನಾಡಿನಲ್ಲಿ ಶುಕ್ರವಾರ ಬೀದರ್, ವಿಜಯಪುರ ಮತ್ತು ರಾಯಚೂರು ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಚಿಂತಾಮಣಿ ಮತ್ತು ಉತ್ತರ ಒಳನಾಡಿನ ಧಾರವಾಡ ಜಿಲ್ಲೆ ಮತ್ತು ದಕ್ಷಿಣ ಒಳನಾಡಿನ ಹಾಸನ ಮತ್ತು ದಾವಣಗೆರೆಯಲ್ಲಿ ತೀವ್ರ ಶೀತ ಗಾಳಿ ಕಂಡುಬಂದಿತ್ತು.
ಉತ್ತರ ಒಳನಾಡಿನ ಬೀದರ್, ಬೆಳಗಾವಿ, ವಿಜಯಪುರ, ಧಾರವಾಡ, ಗದಗ ಮತ್ತು ರಾಯಚೂರು ಮತ್ತು ದಕ್ಷಿಣ ಒಳನಾಡಿನ ಹಾಸನ, ದಾವಣಗೆರೆ ಮತ್ತು ಚಿಂತಾಮಣಿಗಳಲ್ಲಿ ಕನಿಷ್ಠ ತಾಪಮಾನವು 7.0-10.4°C ಮತ್ತು ಉತ್ತರ ಒಳನಾಡಿನ ಹಾವೇರಿ, ಕೊಪ್ಪಳ ಮತ್ತು ಕಲಬುರಗಿ ಮತ್ತು ಶಿವಮೊಗ್ಗ ಮತ್ತು ಬೆಂಗಳೂರಿನಲ್ಲಿ 10.5-12.0°C ವ್ಯಾಪ್ತಿಯಲ್ಲಿತ್ತು.
ದಿನಕ್ಕೊಂದು ಸೀಬೆ ತಿಂದರೆ ಹೃದಯದ ಆರೋಗ್ಯಕ್ಕೆ ಯಾವೆಲ್ಲಾ ಬೆನಿಫಿಟ್ ಇರಲಿದೆ?
ದಕ್ಷಿಣ ಒಳನಾಡಿನ ಆಗುಂಬೆ ಮತ್ತು ಚಿಂತಾಮಣಿಯಲ್ಲಿ ಉಷ್ಣಾಂಶದಲ್ಲಿ ಗಮನಾರ್ಹ ಕುಸಿತ ಕರಾವಳಿ ಕರ್ನಾಟಕದ ಹೊನ್ನಾವರ ಮತ್ತು ಉತ್ತರ ಒಳನಾಡಿನ ಬೆಳಗಾವಿಯಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. ಉಳಿದ ಸ್ಥಳಗಳಲ್ಲಿ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಕಂಡುಬಂದಿಲ್ಲ.