About Us Advertise with us Be a Reporter E-Paper

Breaking Newsದೇಶಪ್ರಚಲಿತಸಿನಿಮಾಸ್
Trending

ಲೋಕಸಭೆ ಚುನಾವಣೆಗೆ ಬಿಜೆಪಿಯಿಂದ ಮೋಹನ್ ಲಾಲ್ ಕಣಕ್ಕೆ..?

ದೆಹಲಿ: ಮಲಯಾಳಂ ನಟ ಮೋಹನ್ ಲಾಲ್ 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ತಿರುವನಂತಪುರ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಕೃಷ್ಣ ಜನ್ಮಾಷ್ಠಮಿಯಂದು ಮೋಹನ್ ಲಾಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದರು. ಬಳಿಕ ಮೋಹನ್ ಲಾಲ್ ಬಿಜೆಪಿಗೆ ಸೇರುತ್ತಾರೆ ಅನ್ನೋ ಸುದ್ದಿ ಹಬ್ಬಿದೆ. ಅಲ್ಲದೆ ಅವರು ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ ಅನ್ನೋ ಮಾತುಗಳೂ ಕೇಳಿಬಂದಿವೆ. ಮೋಹನ್‍ಲಾಲ್ ಮೂಲಕ ಕೇರಳದಲ್ಲಿ ನೆಲೆ ಕಂಡುಕೊಳ್ಳಲು ಬಿಜೆಪಿ ಪ್ರಯತ್ನಿಸುತ್ತಿದೆ ಎನ್ನಲಾಗಿದೆ. ಆದರೆ ರಾಜಕೀಯಕ್ಕೆ ಸೇರ್ಪಡೆಯಾಗುವ ಬಗ್ಗೆ ಮೋಹನ್ ಲಾಲ್ ಇದೂವರೆಗೂ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

ಈ ಬಗ್ಗೆ ಟ್ವೀಟ್ ಮಾಡಿರುವ ಮೋಹನ್ ಲಾಲ್, ‘ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ರೀಕೃಷ್ಣ ಜನ್ಮಾಷ್ಠಮಿಯಂದು ಭೇಟಿ ಮಾಡಿದ್ದೇನೆ. ಈ ವೇಳೆ ವಿಶ್ವಶಾಂತಿ ಫೌಂಡೇಶನ್ ಹಾಗೂ ನಮ್ಮ ಬಹುಮುಖಿ ಸಾಮಾಜಿಕ ಕಾರ್ಯಗಳ ಬಗ್ಗೆ ವಿವರಿಸಲಾಗಿದೆ’ ಎಂದು ಮೋಹನ್ ಲಾಲ್ ಟ್ವೀಟ್ ಮಾಡಿದ್ದಾರೆ.

ಇನ್ನು ಪ್ರಧಾನಿ ನರೇಂದ್ರ ಮೋದಿ ಕೂಡ ಟ್ವೀಟ್ ಮಾಡಿದ್ದು, ಮೋಹನ್ ಲಾಲ್ ಅವರ ಭೇಟಿ ಅದ್ಭುತವಾಗಿತ್ತು. ಅವರ ನಮ್ರತೆ ಪ್ರೀತಿಯಿಂದ ಕೂಡಿದೆ. ಅಲ್ಲದೆ ಅವರ ವ್ಯಾಪಕವಾದ ಸಾಮಾಜಿಕ ಸೇವೆಯ ಉಪಕ್ರಮಗಳು ಶ್ಲಾಘನೀಯ ಮತ್ತು ಅತ್ಯಂತ ಸ್ಪೂರ್ತಿದಾಯಕವಾಗಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close