About Us Advertise with us Be a Reporter E-Paper

Breaking Newsದೇಶ

ಕಾರಿನಿಂದ ಎಳೆದೊಯ್ದು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಲೂಧಿಯಾನ: ಕಾರಿನಿಂದ ಹೊರಗೆ ಎಳೆದುಕೊಂಡು ಹೋಗಿ 21 ವರ್ಷದ ಯುವತಿಯ ಮೇಲೆ 10 ಮಂದಿ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಪಂಜಾಬ್‍ನ ಲೂಧಿಯಾನದಲ್ಲಿ ನಡೆದಿದೆ.

ಸಿಂದ್ವಾನ್ ಕಾಲುವೆಯ ತೀರದಲ್ಲಿರುವ ಇಸವಲ್ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ತಮ್ಮ ಗೆಳೆಯನೊಂದಿಗೆ ಶನಿವಾರ ರಾತ್ರಿ ಲುಧಿಯಾನದಿಂದ ಇಸ್ಸೇವಾಲ್ ಗ್ರಾಮಕ್ಕೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮೂರು ಬೈಕ್‍ಗಳಲ್ಲಿ ಬಂದ ದುಷ್ಕರ್ಮಿಗಳು ಜಾಗ್ರನ್ ಎಂಬಲ್ಲಿ ಕಾರಿಗೆ ತಡೆಯೊಡ್ಡಿದ್ದಾರೆ. ಬಳಿಕ ಸಂತ್ರಸ್ತೆಯನ್ನು ಎಳೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬೈಕ್ ಸವಾರರು ಕಾರನ್ನು ಹಿಂಬಾಲಿಸುತ್ತಿದ್ದರು ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಕಲ್ಲು ಮತ್ತು ಇಟ್ಟಿಗೆಯಿಂದ ಕಾರಿನ ಮೇಲೆ ದಾಳಿ ಮಾಡಿದ್ದಾರೆ. ನಂತರ ಕಾರಿನಲ್ಲಿದ್ದ ಮಹಿಳೆಯನ್ನು ಹೊರಗೆಳೆದು ನಿರ್ಜನ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಮಹಿಳೆ ಮತ್ತು ಆಕೆಯ ಗೆಳೆಯನ್ನು ಭಾನುವಾರದವರೆಗೆ ವಶದಲ್ಲಿರಿಸಿಕೊಂಡಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಸಿವಿಲ್ ಹಾಸ್ಪಿಟಲ್ ವೈದ್ಯರು ದೃಢೀಕರಿಸಿದ್ದಾರೆ. ಪ್ರಕರಣ ಸಂಬಂಧ ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close